Advertisement

ಬಿಹಾರ ಚುನಾವಣೆ 2020: ಕೆಲವು ಹಾಲಿ ಶಾಸಕರು, ಸಂಸದರು, ಸಂಬಂಧಿಗಳಿಗೆ ಟಿಕೆಟ್ ಇಲ್ಲ!

02:08 PM Oct 06, 2020 | Nagendra Trasi |

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಆಡಳಿತರೂಢ ಭಾರತೀಯ ಜನತಾ ಪಕ್ಷ ಸೀಟು ಹಂಚಿಕೆಯ ಸೂತ್ರವನ್ನು ಅಂತಿಮಗೊಳಿಸಿದೆ. ಮೂಲಗಳ ಪ್ರಕಾರ, ಹಾಲಿ ಶಾಸಕರ, ಸಂಸದರ ಸಂಬಂಧಿಗಳಿಗೆ ಬಹುತೇಕ ಟಿಕೆಟ್ ಅನ್ನು ನಿರಾಕರಿಸಿರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Advertisement

ವರದಿಯ ಪ್ರಕಾರ, ಭಾರತೀಯ ಜನತಾ ಪಕ್ಷ ಈ ಬಾರಿ ನೂತನ ಪಟ್ಟಿಯಲ್ಲಿ 5-6 ಹಾಲಿ ಶಾಸಕರ ಹೆಸರನ್ನು ಕೈಬಿಟ್ಟಿರುವುದಾಗಿ ಹೇಳಿದೆ. ಅಷ್ಟೇ ಅಲ್ಲ ಯಾವುದೇ ಹಾಲಿ ಶಾಸಕರ ಸಂಬಂಧಿಗಳಿಗೆ ಅಥವಾ ಆಪ್ತ ಸಹಾಯಕರಿಗೆ ಟಿಕೆಟ್ ನೀಡಲಾಗಿಲ್ಲ ಎಂದು ವಿವರಿಸಿದೆ.

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈವರೆಗೆ ಕೈಗೊಂಡ ಕ್ರಮ ಹಾಗೂ ಟಿಕೆಟ್ ಹಂಚಿಕೆ ಕುರಿತು ಬಿಜೆಪಿ ಮುಖಂಡರು ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಬಿಹಾರ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ಬಹುತೇಕ ಎಲ್ಲಾ ಸ್ಪರ್ಧಿಗಳ ಹೆಸರು, ಕ್ಷೇತ್ರದ ಹೆಸರನ್ನು ಬಿಜೆಪಿ ಸೆಂಟ್ರಲ್ ಕಮಿಟಿ(ಇಸಿಸಿ) ಸೆಪ್ಟೆಂಬರ್ 4ರಂದು ಅಂತಿಮ ನಿರ್ಧಾರ ತೆಗೆದುಕೊಂಡಿತ್ತು.

ಸಿಇಸಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದರು. ಎರಡನೇ ಸುತ್ತಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next