Advertisement

ನ. 29ರೊಳಗೆ ಬಿಹಾರ ವಿಧಾನಸಭಾ ಚುನಾವಣೆ

12:26 AM Sep 05, 2020 | mahesh |

ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆ ಹಾಗೂ 65 ಕ್ಷೇತ್ರಗಳ ಉಪಚುನಾವಣೆ ಒಂದೇ ಸಮಯದಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Advertisement

ಬಿಹಾರ ವಿಧಾನಸಭೆ ಅವಧಿ ನ. 29ಕ್ಕೆ ಪೂರ್ಣಗೊಳ್ಳಲಿದ್ದು, ಇದಕ್ಕೂ ಮುನ್ನವೇ ಅಂದರೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಯಲಿದೆ. ಅಲ್ಲದೇ ಮಧ್ಯಪ್ರದೇಶ, ಉತ್ತರ ಪ್ರದೇಶ, ಕೇರಳ, ತಮಿಳುನಾಡು, ಅಸ್ಸಾಂ ಮತ್ತಿತರ ರಾಜ್ಯಗಳಲ್ಲಿ ತೆರವಾಗಿರುವ 64 ವಿಧಾನಸಭಾ ಹಾಗೂ ಒಂದು ಲೋಕಸಭಾ ಉಪಚುನಾವಣೆ ಇದೇ ಅವಧಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರಾ “ಇಂಡಿಯಾ ಟುಡೆ ವಾಹಿನಿ’ಗೆ ತಿಳಿಸಿದ್ದಾರೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಯನ್ನು ಸುರಕ್ಷತಾ ಕ್ರಮಗಳೊಂದಿಗೆ ನಡೆಸಲು ಆಯೋಗ ಸಿದ್ಧತೆ ನಡೆಸುತ್ತಿದ್ದು, ಅಕ್ಟೋಬರ್‌ ಹಾಗೂ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.

ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next