Advertisement

ಬಿಹಾರದ ಸಿಎಂ ನಿತೀಶ್‌ಗೆ ಕೋವಿಡ್ ಸೋಂಕು ದೃಢ

10:26 PM Jul 26, 2022 | Team Udayavani |

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಮಂಗಳವಾರ ಕೊರೊನಾ ಸೋಂಕು ದೃಢವಾಗಿದೆ.

Advertisement

ಕಳೆದ ಮೂರು-ನಾಲ್ಕು ದಿನಗಳಿಂದ ಅವರಿಗೆ ಜ್ವರವಿದ್ದು, ಮನೆಯಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ ತಮ್ಮ ಸಂಪರ್ಕಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೆ ಅವರು ಮನವಿ ಮಾಡಿದ್ದಾರೆ.

ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಿತೀಶ್‌ ಅವರು ಭಾಗವಹಿಸಿರಲಿಲ್ಲ. ನಿತೀಶ್‌ ಅವರಿಗೆ ಇದೇ ವರ್ಷ ಜನವರಿಯಲ್ಲಿ ಕೊರೊನಾ ಸೋಂಕು ದೃಢವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next