Advertisement

Bihar: ಟಿಕೆಟ್ ನೀಡಿದರೆ ಪಕ್ಷಕ್ಕೆ ಸೇರುವೆ… BJP ಸೇರುವ ಸುಳಿವು ನೀಡಿದ ಕಾಂಗ್ರೆಸ್ ಶಾಸಕಿ

12:06 PM Mar 02, 2024 | Team Udayavani |

ಪಾಟ್ನಾ: ಲೋಕ ಸಭಾ ಚುನಾವಣೆಗೂ ಮೊದಲು ಬಿಹಾರ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಅಲ್ಲದೆ ಮಹಾಘಟಬಂಧನ್ ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ.

Advertisement

ಲೋಕ ಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಸಮಯದಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್‌ನ ಹಲವು ಶಾಸಕರು ಬಿಜೆಪಿ ಸೇರಿ ಶಾಕ್ ನೀಡಿದ್ದು ಇದೇ ವೇಳೆ ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಕೂಡ ಶುಕ್ರವಾರ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪಾಟ್ನಾದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ತನಗೆ ಸಂಸದೆಯಾಗುವ ಭಾವನೆ ಇದೆ, ನವಾಡ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದರೆ ಬಿಜೆಪಿ ಸೇರುವ ಯೋಚನೆ ಮಾಡುವುದಾಗಿ ಹೇಳಿದ್ದಾರೆ.

ನವಾಡದಿಂದ ಸ್ಪರ್ಧಿಸುವೆ: ನೀತು ಸಿಂಗ್
ಮುಂಬರುವ ಲೋಕ ಸಭಾ ಚುನಾವಣೆಗೆ ನವಾಡ ಕ್ಷೇತ್ರದ ಟಿಕೆಟ್ ನೀಡಿದರೆ ಬಿಜೆಪಿಗೆ ಸೇರುವುದಾಗಿ ಸ್ಪಷ್ಟವಾಗಿ ಹೇಳಿದ್ದರು. ನವಾಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ನವಾಡದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂಬುದು ನನ್ನ ಅಸೆ ಹಾಗಾಗಿ ಯಾವ ಪಕ್ಷ ಟಿಕೆಟ್ ಕೊಟ್ಟರೂ ಸೇರುತ್ತೇವೆ ಎಂದರು. ನವಾಡ ಭೂಮಿಹಾರ್ ಪ್ರಾಬಲ್ಯದ ಪ್ರದೇಶವಾಗಿದೆ. ಪ್ರತಿ ಬಾರಿಯೂ ಈ ಕ್ಷೇತ್ರದಲ್ಲಿ ಹೊರಗಿನ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿ ಸಂಸದರಾಗುತ್ತಾರೆ. ಈ ಬಾರಿ ಸ್ಥಳೀಯರಿಗೆ ಅವಕಾಶ ಸಿಗಬೇಕು. ನಾನು ಸ್ಥಳೀಯ ಅಭ್ಯರ್ಥಿ ಹಾಗಾಗಿ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಹೇಳಿದ್ದೇನೆ. ನನಗೆ ಕಾಂಗ್ರೆಸ್ ಮೇಲೆ ಕೋಪವಿಲ್ಲ ಆದರೆ ನಮಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: Azam Cheema: 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರ ಪಾಕ್‌ನಲ್ಲಿ ನಿಧನ… ಮೂಲಗಳು

Advertisement
Advertisement

Udayavani is now on Telegram. Click here to join our channel and stay updated with the latest news.

Next