ಬಿಹಾರ: ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇದುವರೆಗೆ 70 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಎಸ್ ಐಟಿ ಅಧಿಕಾರಿಗಳ ತಂಡ ಮದ್ಯ ಕಳ್ಳಸಾಗಣೆದಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರನ್ ಜಿಲ್ಲೆಯ ಅಕ್ರಮ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯ ಕಳ್ಳಸಾಗಣೆದಾರ ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂಬಾತನನ್ನು ಬಂಧಿಸಿ, ಆರೋಪಿಯಿಂದ 2.17 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಫಿಫಾ ವರ್ಲ್ಡ್ ಕಪ್: ಫ್ರಾನ್ಸ್ ಸೋಲಿನ ಬೆನ್ನಲ್ಲೇ ಪೊಲೀಸರ ಮೇಲೆ ಕಲ್ಲು,ಬಾಟಲಿ ತೂರಾಟ; ಭುಗಿಲೆದ್ದ ಆಕ್ರೋಶ
ಅಕ್ರಮ ಮದ್ಯ ಸೇವನೆಯಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಶ್ರಖ್ ಮತ್ತು ಇಶುಪುರ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎರಡು ಎಫ್ಐಆರ್ಗಳಲ್ಲಿ ಆರೋಪಿಯ ಹೆಸರಿಲ್ಲವಾದರೂ, ಎಸ್ಐಟಿ ತನಿಖೆಯ ಸಂದರ್ಭದಲ್ಲಿ ಆರೋಪಿ ಭಾಗಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ಈ ಹಿಂದೆ ಮದ್ಯ ಸಾಗಾಣಿಕೆದಾರನ ಅಖಿಲೇಶ್ ಕುಮಾರ್ ಯಾದವ್ ವಿರುದ್ಧಅಬಕಾರಿ ಕಾಯ್ದೆಯಡಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು.