ಕತಿಹಾರ್ (ಬಿಹಾರ): ಸಂಯುಕ್ತ ಜನತಾ ದಳ (ಜೆಡಿಯು) ಮುಖಂಡ ಕೈಲಾಶ್ ಮಹತೋ ಅವರನ್ನು ಬಿಹಾರದ ಕತಿಹಾರ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬರಾರಿ ಬಜಾರ್‌ನಲ್ಲಿ ಜೆಡಿಯು ಮುಖಂಡ ಕೈಲಾಶ್ ಮಹತೋ ಅವರನ್ನು ಗುಂಡಿಕ್ಕಿ ಕೊಂದ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಗುಂಡು ತಗುಲಿದ ನಂತರ ಸ್ಥಳೀಯರು ಕೈಲಾಶ್ ಮಹತೋನನ್ನು ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿಯ ವೈದ್ಯರು ಅವರು ಮೃತಪಟ್ಟಿರುವುದಾಗಿ ಹೇಳಿದರು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕತಿಹಾರ್ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಕತಿಹಾರ್ದ ಎಸ್ಡಿಪಿಒ ಓಂಪ್ರಕಾಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಘಟನೆ ಕುರಿತು ಬರಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಶೋಧ ಕಾರ್ಯ ಕೈಗೊಂಡಿದ್ದಾರೆ.