Advertisement

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

12:26 AM Sep 20, 2024 | Team Udayavani |

ನವಾದಾ: ಬಿಹಾರದ ನವಾದಾ ಜಿಲ್ಲೆಯಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ 21 ದಲಿತರ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನವಾದಾ ಜಿಲ್ಲೆಯಲ್ಲಿ ಕಿಡಿಗೇಡಿಗಳು ದಲಿತರ ಮನೆಗಳಿಗೆ ನುಗ್ಗಿ, ಅವರನ್ನು ಥಳಿಸಿ ಬಳಿಕ ಮನೆಗಳಿಗೆ ಬೆಂಕಿಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

Advertisement

ಈ ವಿಚಾರ ಬಿಹಾರದಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ ಜೆಡಿಯು ಮತ್ತು ಬಿಜೆಪಿ ಆಡಳಿತದಲ್ಲಿ ಬಿಹಾರದಲ್ಲಿ ಜಂಗಲ್‌ರಾಜ್‌ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್‌ ಮತ್ತು ಆರ್‌ಜೆಡಿ ಟೀಕಿಸಿದೆ. ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಧಿಕಾರಿಗಳ ಸಭೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next