ನವದೆಹಲಿ:ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ(ಜೂನ್ 08) ಘೋಷಿಸಿದ್ದಾರೆ.
ಇದನ್ನೂ ಓದಿ:ಜಾರಕಿಹೊಳಿ ಕೇಸ್ ಗೆ ಹೊಸ ತಿರುವು: ಸರ್ಕಾರ, ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
ಮುಂದಿನ ಒಂದು ವಾರಗಳ ಕಾಲ ಕೋವಿಡ್ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಅನ್ವಯವಾಗಲಿದೆ. ನಂತರ ಕೋವಿಡ್ ಪ್ರಕರಣಗಳ ಪರಿಸ್ಥಿತಿ ಪರಿಶೀಲಿಸಿ ಲಾಕ್ ಡೌನ್ ಬಿಗಿಗೊಳಿಸಬೇಕೆ ಅಥವಾ ನಿರ್ಬಂಧ ಸಡಿಲಿಕೆ ಮಾಡಬೇಕೆ ಎಂಬ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ರಾತ್ರಿ ಕರ್ಫ್ಯೂ ಸಂಜೆ 7ರಿಂದ ಬೆಳಗ್ಗೆ 5ಗಂಟೆವರೆಗೆ ಮುಂದುವರಿಯಲಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಶೇ.50ರಷ್ಟು ಸಿಬಂದಿಗಳ ಸಾಮರ್ಥ್ಯದೊಂದಿಗೆ ಸಂಜೆ 4ಗಂಟೆವರೆಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ವರದಿ ಹೇಳಿದೆ.
ಸಂಜೆ 5ಗಂಟೆವರೆಗೆ ಅಂಗಡಿಗಳು ತೆರೆಯಲು ಅವಕಾಶ ನೀಡಿದ್ದು, ಖಾಸಗಿ ವಾಹನಗಳು ಸಂಚರಿಸಬಹುದಾಗಿದೆ. ಆನ್ ಲೈನ್ ತರಗತಿಗಳು ಎಂದಿನಂತೆ ನಡೆಯಲಿದೆ. ಲಾಕ್ ಡೌನ್ ಸಡಿಲಿಕೆ ಮಾಡಿದ ಸಂದರ್ಭದಲ್ಲಿ ಜನರು ಗುಂಪುಗೂಡಬಾರದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಟ್ವೀಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.