ಭಟ್ಕಳ: ಬೈಕುಗಳೆರಡರ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತ ಪಟ್ಟು ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಸಬ್ಬತ್ತೆ ಕ್ರಾಸ್ ನಲ್ಲಿ ನಡೆದಿದೆ.
ಕುಂಟವಾಣಿ ಕಡೆಯಿಂದ ಹೋಂಡಾ ಎಕ್ಟಿವಾದಲ್ಲಿ ರಮೇಶ ಬಾಂದಿ ಹಾಗೂ ಸುಜಾತಾ ಬಾಂದಿ ಇವರಿದ್ದ ಬೈಕಿಗೆ ಎದುರುಗಡೆಯಿಂದ ಪ್ರದೀಪ ಗೊಂಡ ಇವರು ಬೈಕಿನಲ್ಲಿ ವೇಗವಾಗಿ ಬಂದು ಢಿಕ್ಕಿ ಹೊಡೆದ ಪರಿಣಾಮ ಮೂವರೂ ಕೂಡಾ ರಸ್ತೆಯ ಮೇಲೆಯೇ ಬಿದ್ದು ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಬೈಕ್ ಸವಾರ ಪ್ರದೀಪ ರಾಮಯ್ಯ ಗೊಂಡ ಈತನು ದಾರಿಯ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.
ತೀವ್ರವಾಗಿ ಗಾಯಗೊಂಡಿರುವ ಸುಜಾತಾ ಬಾಂದಿ ಹಾಗೂ ರಮೇಶ ಬಾಂದಿ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.