ಮಣಿಪಾಲ: ದ್ವಿಚಕ್ರ ವಾಹನವೊಂದು ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ (ಮಾ.25 ರಂದು) ನಡೆದಿದೆ.
Advertisement
ಸಿಂಡಿಕೇಟ್ ಸರ್ಕಲ್ ನಿಂದ ಉಡುಪಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ.
ಘಟನೆಯ ದೃಶ್ಯಾವಳಿ ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.