Advertisement

ಬೈಕ್‌ ನಿಯಂತ್ರಣ ತಪ್ಪಿ ಬಿದ್ದು ಸವಾರ ಸಾವು

12:00 PM Jul 28, 2022 | Team Udayavani |

ಅಂಕೋಲಾ: ಸವಾರನ ನಿಯಂತ್ರಣ ತಪ್ಪಿ ಬೈಕ್‌ ಉರುಳಿದ ಪರಿಣಾಮ  ಕಾಲೇಜ್ ಉಪನ್ಯಾಸಕರೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾ.ಹೆ.66ರ ಬೆಳೆಸೆಯಲ್ಲಿ ಗುರುವಾರ ನಡೆದಿದೆ.

Advertisement

ತಾಲೂಕಿನ ವಾಸರೆಕುದ್ರಿಗೆಯ ನಿವಾಸಿ ಅರವಿಂದ್ ಬೀರಾ ಆಗೇರ (49) ಮೃತಪಟ್ಟ ದುರ್ದೈವಿ.

ಅರವಿಂದ್ ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ವಿಷಯದ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮುಂಜಾನೆ ವಾಸರೆ ಕುದ್ರಿಗೆಯಿಂದ ಕಾಲೇಜಿಗೆ ಬರುತ್ತಿರುವ ವೇಳೆ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗಮದ್ಯೆ ಮೃತಪಟ್ಟಿದ್ದಾರೆ. ಘಟನೆ ಕುರಿತು ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮುಂದುವರಿದ ರಾಜೀನಾಮೆ ಪರ್ವ: ರಾಜೀನಾಮೆಗೆ ಸಕಾಲವಲ್ಲ ಎಂದ ಗುನ್ಹಾಳಕರ

Advertisement

Udayavani is now on Telegram. Click here to join our channel and stay updated with the latest news.

Next