ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಲು ಬಂದಿದ್ದ ಇಬ್ಬರು ಕಳ್ಳರನ್ನು ಹಿಡಿಯಲು ಹೋದ ಗ್ರಾಮಸ್ಥರ ಮೇಲೆ ಕಳ್ಳರು ಫೈರಿಂಗ್ ಮಾಡಿರುವ ಘಟನೆ ಪೆರೆಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ವೇನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕಳ್ಳರ ಗುಂಡೇಟಿನಿಂದ ಗಾಯಗೊಂಡಿರುವ ಗಂಗಾಧರ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕಳ್ಳರು ರಸ್ತೆ ಬದಿಯಲ್ಲಿ ನಿಂತಿದ್ದ ವಾಹನವನ್ನು ಕದಿಯಲು ಯತ್ನಿಸಿದಾಗ ಎಚ್ಚೆತ್ತುಕೊಂಡ ವಾಹನದ ಮಾಲೀಕ ಕೂಡಲೇ ಗ್ರಾಮಸ್ಥರನ್ನು ಎಚ್ಚರಿಸಿದ್ದಾನೆ. ಗ್ರಾಮಸ್ಥರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ, ತಪ್ಪಿಸಿಕೊಳ್ಳುತ್ತಿದ್ದ ಕಳ್ಳರನ್ನು ಹಿಡಿಯಲು ಹೋದ ಗಂಗಾಧರ್ ಮೇಲೆ ಕಳ್ಳರು ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಶೇವ್, ಗಡ್ಡ ಟ್ರಿಮ್‌ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್ ಆಡಳಿತ ಹೊಸ ಆದೇಶ
ಕಳ್ಳರ ಗುಂಡೇಟಿನಿಂದ ಗಾಯಗೊಂಡಿರುವ ಗಂಗಾಧರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಳ್ಳರನ್ನು ಬಂಧಿಸಲು ಬಲೆ ಬೀಸಿದ್ದಾರೆ.