Advertisement

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

09:49 PM Apr 13, 2021 | Team Udayavani |

ವಿಟ್ಲ : ಬೈಕ್ – ಪಿಕಪ್ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

Advertisement

ಇಲ್ಲಿಯ ಬೋಳಂತೂರು ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್, ಎದುರಗಡೆ ಬರುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದರು. ಇವರ ಪೈಕಿ ಓರ್ವ ಆಸ್ಪತ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಇನ್ನು ಇನ್ನೋರ್ವರ ಸವಾರನ ಸ್ಥಿತಿ ಗಂಭೀರವಾಗಿದೆ. ಘಟನೆ ಸಂಭವಿಸಿದ ಬಳಿಕ ಪಿಕಪ್ ಚಾಲಕ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next