Advertisement

ಬೈಕ್ ಮುಖಾಮುಖಿ: ಓರ್ವನ ಸಾವು, ಇಬ್ಬರು ಗಂಭೀರ

09:31 AM Mar 02, 2022 | Team Udayavani |

ಸಾಗರ: ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Advertisement

ನಾಗಪ್ಪ ಹಾಗೂ ಅವರ ಪುತ್ರ ಲೋಹಿತ್ (16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದದಲ್ಲಿ ನಿವಾಸಿ ಕಿರಣ್ (20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ:ಸಂತೆಕಟ್ಟೆ: ಭೀಕರ ಅಪಘಾತ ತಂದೆ – ಮಗಳು ಸಾವು

ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್ ಹಾಗೂ ಕಿರಣ್ ಸ್ಥಿತಿ ಗಂಭೀರವಾಗಿದೆ. ಸಾಗರ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next