Advertisement
ಮೃತ ದುರ್ದೈವಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್, ವೇಣೂರಿನ ಮರೋಡಿ ನಿವಾಸಿ ಎಚ್.ಸಿ ಅಬೂಬಕ್ಕರ್ (47)ಎನ್ನುವವರಾಗಿದ್ದಾರೆ.
ಘಟನೆಯಲ್ಲಿ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆಯ ಇತರ ಸಿಬಂದಿ ಗಳೊಂದಿಗೆ ಕಾರ್ಯಕ್ರಮಕ್ಕೆ ತೆರಳಿದ್ದ ಅಬೂಬಕ್ಕರ್ ಅವರು ತನ್ನ ಬೈಕಿನಲ್ಲಿ ವಾಪಸಾಗುತ್ತಿದ್ದರೆ, ಉಳಿದವರು ಇಲಾಖಾ ಜೀಪಿನಲ್ಲಿ ಹಿಂಬಂದಿಯಿಂದ ಆಗಮಿಸುತ್ತಿದ್ದರು. ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
Related Articles
Advertisement
ಚಿಂತಾಜನಕ ಸ್ಥಿತಿಯಲ್ಲಿ ದ್ದ ಅಬೂಬಕ್ಕರ್ ಅವರನ್ನು ಅದೇ ಜೀಪಿನಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಹೆದ್ದಾರಿ ಯಲ್ಲಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು ಯಾವುದೇ ಸಿಬ್ಬಂದಿ ಗಳಿಲ್ಲದೆ ಬೀಗ ಹಾಕಿರುವುದು ಸ್ಥಳೀಯ ರ ಆಕ್ರೋಶ ಕ್ಕೆ ಕಾರಣವಾಗಿದೆ.ಜೀವ ಉಳಿಸಬೇಕಾದ ಸರಕಾರಿ ಆಸ್ಪತ್ರೆಗಳ ಬೇಜಾವಬ್ದಾರಿತನಕ್ಕೆ ಇದೊಂದು ಉದಾಹರಣೆ ಆಗಿದೆ. ಈ ಹಿಂದೆಯೂ ಕೂಡ ಇದೇ ರೀತಿಯ ಘಟನೆಗಳಾದಗಲೂ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ, ಗಾಯಳುಗಳು , ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ಪರದಾಡಿದ ಪ್ರಸಂಗಗಳು ನಡೆದಿದೆ ಎಂದು ಸ್ಥಳೀಯ ರು ಆರೋಪಿಸಿದ್ದಾರೆ. ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಸಿಬ್ಬಂದಿಗಳು ಕಣ್ಣೆದುರಲ್ಲೆ ಪ್ರಾಣ ಬಿಟ್ಟ ಸಹೋದ್ಯೋಗಿ ಯ ಜೀವ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಂಬನಿ ಮಿಡಿದಿದ್ದಾರೆ. ಸಹೋದ್ಯೋಗಿ ಅಬೂಬಕ್ಕರ್ ಅವರ ಅಕಾಲಿಕ ಸಾವಿನಿಂದ ಪುಂಜಾಲಕಟ್ಟೆ ಠಾಣೆ ಶೋಕತಪ್ತವಾಗಿದೆ. ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.