ಚನ್ನಗಿರಿ: ಸರ್ಕಾರಿ ಬಸ್ ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಸುಣಿಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ನಡೆದಿದೆ.
Advertisement
ಆಗರದಹಳ್ಳಿ ಕ್ಯಾಂಪ್ ನಿವಾಸಿ ಕುಬೇರ (35) ಮೃತ ದುರ್ಧೈವಿ. ಚನ್ನಗಿರಿಯಿಂದ ಸ್ವಗ್ರಾಮ ಆಗರದಹಳ್ಳಿಗೆ ಹೋಗುವ ಮಾರ್ಗದಲ್ಲಿ ಶಿವಮೊಗ್ಗ ಮಾರ್ಗದಿಂದ ಬರುತ್ತಿದ್ದ ಸರ್ಕಾರಿ ಬಸ್ ಗೆ ಬೈಕ್ ಅತಿವೇಗದಲ್ಲಿ ಢಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪಿದ್ದಾನೆ.
ಬೈಕ್ ಸವಾರನ ವೇಗದ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.