ಬಂಟ್ವಾಳ: ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಹಸವಾರರಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಲ್ಪನೆ ಸಮೀಪದ ಕುಂಟಲ್ ಪಾಡಿ ಎಂಬಲ್ಲಿ ಗುರುವಾರ(ಜೂ.27 ರಂದು) ರಾತ್ರಿ ವೇಳೆ ನಡೆದಿದೆ.
ಬಿಸಿರೋಡಿನ ಕೊಡಂಗೆ ನಿವಾಸಿ ಮೋಹಿನಿ ಶೆಟ್ಟಿ (68) ಮೃತಪಟ್ಟ ಮಹಿಳೆಯಾಗಿದ್ದಾರೆ.
ಅವರು ಕಲ್ಪನೆಯಲ್ಲಿರುವ ಮಗನ ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಮನೆಯ ಪಕ್ಕದ ವ್ಯಕ್ತಿಯೊರ್ವನ ಬೈಕಿನಲ್ಲಿ ಹಿಂಬದಿಯಲ್ಲಿ ಕುಳಿತುಕೊಂಡು ಪ್ರಯಾಣಿಸುತ್ತಿದ್ದ ವೇಳೆ ಕುಂಟಲ್ ಪಾಡಿ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಅಡ್ಡ ಬಿದ್ದ ಪರಿಣಾಮ ರಸ್ತೆ ಗೆ ಬಿದ್ದು ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಮಹಿಳೆಯನ್ನು ಬಂಟ್ವಾಳ ಆಸ್ಪತ್ರೆಗೆ ಕೊಂಡುಹೋಗಲಾಯಿತಾದರೂ ಅದಾಗಲೇ ಮಹಿಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.