ಘಾಜಿಯಾಬಾದ್ : ಬೈಕ್ ಮೇಲೆ ಸ್ಟಂಟ್ ಮಾಡುತ್ತಿದ್ದ ಇಬ್ಬರು ಯುವತಿಯರಿಗೆ ಪೊಲೀಸರು 28,000 ದಂಡ ಹಾಕಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ.
ಇನ್ ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಾಕುವ ಉದ್ದೇಶದಿಂದ ಶಿವಂಗಿ ದಬಸ್ ಮತ್ತು ಸ್ನೇಹಾ ರಘುವಂಶಿ ಎಂಬುವವರು ಬೈಕ್ ಮೇಲೆ ಸ್ಟಂಟ್ ಮಾಡಿದ್ದಾರೆ. ಒಬ್ಬರು ಬೈಕ್ ಓಡಿಸುತ್ತಿದ್ರೆ ಮತ್ತೊಬ್ಬರು ಆಕೆಯ ಮೇಲೆ ಕುಳಿತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ಬೈಕ್ ಸ್ಟಂಟ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಂಚಾರಿ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಘಾಜಿಯಾಬಾದ್ ಪೊಲೀಸರು ದಂಡ ಹಾಕಿದ್ದಾರೆ.
ಘಾಜಿಯಾಬಾದ್ ಎಸ್ ಪಿ ಮಾತನಾಡಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ಕಾರಣ ಮತ್ತು ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಓಡಿಸಿದ್ದಕ್ಕಾಗಿ ದಂಡ ವಿಧಿಸಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.