Advertisement

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

10:27 AM Apr 17, 2024 | Team Udayavani |

ಬೆಂಗಳೂರು: ಹಗಲಿನಲ್ಲಿ ಫ‌ುಡ್‌ ಡೆಲಿವರಿ ಬಾಯ್‌ ಕೆಲಸ ಮಾಡಿಕೊಂಡು, ರಾತ್ರಿ ವೇಳೆ ಬೈಕ್‌ ಕಳವು ಮಾಡುತ್ತಿದ್ದ ಕಳ್ಳನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಜೆ.ಪಿ.ನಗರದ ಜರಗನಹಳ್ಳಿ ನಿವಾಸಿ ದೀಪು(26) ಬಂಧಿತ. ಆರೋಪಿಯಿಂದ 3 ಲಕ್ಷ ರೂ. ಮೌಲ್ಯದ 5 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಪಿಯು ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸಿರುವ ಆರೋಪಿ, 19ನೇ ವಯಸ್ಸಿನಲ್ಲೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದ. ಜೈಲಿನಿಂದ 10 ದಿನಗಳ ಹಿಂದಷ್ಟೇ ಜಾಮೀನು ಪಡೆದು ಹೊರಬಂದಿದ್ದ ಆರೋಪಿ, ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದು, ಪುಡ್‌ ಡೆಲಿವರಿ ನೆಪದಲ್ಲಿ ಮನೆ ಮುಂದೆ ನಿಲ್ಲಿಸಿರುವ ಬೈಕ್‌ಗಳನ್ನು ಗಮನಿಸಿ ರಾತ್ರಿ ವೇಳೆ ಬಂದು ಹ್ಯಾಂಡಲ್‌ ಲಾಕ್‌ ಮುರಿದು ಬೈಕ್‌ ಕಳ್ಳತನ ಮಾಡುತ್ತಿದ್ದ. ಇತ್ತೀಚೆಗೆ ಬೈಯ್ಯಪ್ಪನಹಳ್ಳಿಯ ಜಿ.ಎಂ.ಪಾಳ್ಯದಲ್ಲಿ ದ್ವಿಚಕ್ರ ವಾಹನ ಕದ್ದು ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

84 ಬೈಕ್‌ಗಳು ಕದ್ದಿದ್ದ: ತಾಯಿಯೊಂದಿಗೆ ವಾಸವಾಗಿರುವ ದೀಪಕ್‌ ಸುಲಭವಾಗಿ ಹಣ ಸಂಪಾದನೆ ಮಾಡಲು ಕಳ್ಳತನ ಮಾಡುವುದನ್ನು ವೃತ್ತಿಯಾಗಿಸಿಕೊಂಡಿದ್ದಾನೆ. 2019ರಲ್ಲೇ ಈತನನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದರು. ಹಲವು ಬಾರಿ ಜೈಲಿಗೆ ಹೋಗಿ ಬಂದರೂ ಮತ್ತೆ ಕಳ್ಳತನ ಕೃತ್ಯದಲ್ಲಿ ತೊಡಗಿಸಿಕೊಂ ಡಿದ್ದಾನೆ. ಈತನ ವಿರುದ್ಧ ಬ್ಯಾಡರಹಳ್ಳಿ, ಕೋಣನಕುಂಟೆ, ಪುಟ್ಟೇನಹಳ್ಳಿ ಹಾಗೂ ಜೆ.ಪಿ.ನಗರ ಪೊಲೀಸ್‌ ಠಾಣೆಗಳಲ್ಲಿ ದಿcಚಕ್ರ ವಾಹನ ಹಾಗೂ ಮನೆ ಕಳವು ಪ್ರಕರಣಗಳು ದಾಖಲಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next