Advertisement

ಬೈಪಾಸ್ ರಸ್ತೆಯಲ್ಲಿ ಬೈಕ್ ವೀಲಿಂಗ್: ಯುವಕನಿಗೆ 7 ಸಾವಿರ ರೂ. ದಂಡ

12:48 PM Jul 05, 2022 | Team Udayavani |

ಕೊರಟಗೆರೆ: ತಾಲ್ಲೂಕಿನ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳನ್ನು ವೀಲಿಂಗ್ ಮಾಡಿಕೊಂಡು ಪುಂಡಾಟ ನಡೆಸುತ್ತಿದ್ದ ಯುವಕನೊರ್ವನಿಗೆ 7 ಸಾವಿರ ರೂ ದಂಡ ವಿಧಿಸಿ, ವಾಹನ ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ.

Advertisement

ಕೊರಟಗೆರೆ ಪಟ್ಟಣದ ನಿವಾಸಿ ಮುತ್ತುರಾಜು ಬಿನ್ ಗಂಗರಾಜು ಬೈಕ್ ವೀಲಿಂಗ್‌ ನಡೆಸುತ್ತಿದ್ದ ಯುವಕ.

ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಬೈಕ್ ವೀಲಿಂಗ್ ನಡೆಸಿ ಪುಂಡಾಟ ನಡೆಸುತ್ತಿದ್ದ ವೇಳೆ ಕೊರಟಗೆರೆ ವೃತ್ತ ನಿರೀಕ್ಷಕ ಸಿದ್ದರಾಮೇಶ್ವರ ಅವರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ನಮ್ಮದು ಜಿರೋ ಟಾಲಾರೆನ್ಸ್. ಯಾವುದನ್ನು ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ

ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರಟಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ ಯುವಕನಿಗೆ  7ಸಾವಿರ ರೂ ದಂಡ ವಿಧಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next