Advertisement

1993ರ ಬಾಂಬ್ ಬ್ಲಾಸ್ಟ್ ಪ್ರಮುಖ ಆರೋಪಿ, ವೀರಪ್ಪನ್ ಸಹಚರ ಬಿಲವೇಂದ್ರನ್ ನಿಧನ

03:23 PM Aug 20, 2020 | keerthan |

ಮೈಸೂರು: 22 ಪೊಲೀಸರ ಸಾವಿಗೆ ಕಾರಣವಾಗಿದ್ದ 1993ರ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ, ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ (70) ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.

Advertisement

ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖೈದಿ ಕಳೆದ ಮಧ್ಯರಾತ್ರಿ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

1993ರಲ್ಲಿ ಚಾಮರಾಜನಗರ ಜಿಲ್ಲೆಯ ಗಡಿ ಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಫೋಟಿಸಿ 22 ಮಂದಿ ಸಾವಿಗೆ ಕಾರಣರಾದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ. ನಂತರ 2014ರಲ್ಲಿ ಅದನ್ನು ಜೀವಾವದಿ ಶಿಕ್ಷೆಗೆ ಮಾರ್ಪಡಿಸಲಾಗಿತ್ತು. 2014ರಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಈತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿತ್ತು.

ವಾರಗಳ ಅನಾರೋಗ್ಯದ ನಂತರ ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಬಿಲವೇಂದ್ರನ್ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬಿಕರಿಗೆ ನೀಡಲಾಗುವುದು ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next