ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ( ರಿ) ಸುಬ್ರಹ್ಮಣ್ಯ ಇದರ ಆಡಳಿತಕ್ಕೊಳಪಟ್ಟ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ಬಾಲಕಿಯರ ತಂಡ ಜಿಲ್ಲಾ ಮಟ್ಟದ ಖೋ -ಖೋ ಪಂದ್ಯಾಟದಲ್ಲಿ ಜಯಿಸಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ.
ಮಂಗಳೂರಿನ ಕಾಟಿಪಳ್ಳದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಖೋ -ಖೋ ಪಂದ್ಯಾಟದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ತಂಡ ಉತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇತ್ತೀಚೆಗಷ್ಟೇ ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಈ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ದೈಹಿಕ ಶಿಕ್ಷಣ ಶಿಕ್ಷಕರಾದ ವಿನಯ್ ಕುಮಾರ್ ಇವರು ತಂಡಕ್ಕೆ ಮಾರ್ಗದರ್ಶನ ನೀಡಿದ್ದಾರೆ.
ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ ತಂಡಕ್ಕೆ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯಶಂಕರ್ ಎಂ., ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ‘#3kaDream’ ; ವಿಶ್ವಕಪ್ ಮೊದಲು ಹೊಸ ವಿಡಿಯೋ ಬಿಡುಗಡೆ ಮಾಡಿದ ಅಡಿಡಾಸ್