Advertisement

Bilkis Bano ಕೇಸ್ ; ಕೂಡಲೇ ಮೂಲ ದಾಖಲೆ ಸಲ್ಲಿಸಲು ಸುಪ್ರೀಂ ಆದೇಶ

08:07 PM Oct 12, 2023 | Team Udayavani |

ಹೊಸದಿಲ್ಲಿ: 2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಶಿಕ್ಷೆ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸೂಚಿಸಿದೆ.

Advertisement

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಬಿಲ್ಕಿಸ್ ಬಾನೋ ಅವರ ವಕೀಲರು ಮತ್ತು ಕೇಂದ್ರ, ಗುಜರಾತ್ ಸರ್ಕಾರ ಮತ್ತು ಪಿಐಎಲ್ ಅರ್ಜಿದಾರರ ಸಲ್ಲಿಕೆಗಳನ್ನು ಆಲಿಸಿದ ನಂತರ ಅಪರಾಧಿಗಳಿಗೆ ನೀಡಲಾದ ಉಪಶಮನವನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಬಿಲ್ಕಿಸ್ ಬಾನೊ ಅವರು ಗುಜರಾತ್ ಸರಕರವು ನೀಡಿರುವ ಪರಿಹಾರವನ್ನು ವಿರೋಧಿಸಿ ಸಲ್ಲಿಸಿದ ಅರ್ಜಿಯ ಜತೆಗೆ, ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಮತ್ತು ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಅಪರಾಧಿಗಳಿಗೆ ನೀಡಲಾದ ಉಪಶಮನ ಮತ್ತು ಅವರ ಅವಧಿಪೂರ್ವ ಬಿಡುಗಡೆಯ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಕೋಮುಗಲಭೆಗಳ ಭೀಕರತೆಯಿಂದ ಪಲಾಯನ ಮಾಡುವಾಗ ಬಿಲ್ಕಿಸ್ ಬಾನೋ 21 ವರ್ಷದವಳಾಗಿದ್ದು, ಐದು ತಿಂಗಳ ಗರ್ಭಿಣಿಯಾಗಿದ್ದಳು. ಗಲಭೆಯಲ್ಲಿ ಸಾವನ್ನಪ್ಪಿದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

Advertisement

Udayavani is now on Telegram. Click here to join our channel and stay updated with the latest news.

Next