ನವದೆಹಲಿ: ಬಿಲ್ಕಿಸ್‌ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಮಾ.27ರಂದು ಸುಪ್ರೀಂಕೋರ್ಟ್‌ನ ಹೊಸ ನ್ಯಾಯಪೀಠ ನಡೆಸಲಿದೆ.
ನ್ಯಾ.ಕೆ.ಎಂ.ಜೋಸೆಫ್ ಹಾಗೂ ನ್ಯಾ. ಬಿ.ವಿ.ನಾಗರತ್ನ ಅವರ ನೇತೃತ್ವದ ನ್ಯಾಯಪೀಠ ಅದನ್ನು ಕೈಗೆತ್ತಿಕೊಳ್ಳಲಿದೆ. ಮಾ.22ರಂದು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ನೂತನ ಪೀಠ ರಚನೆಗೆ ಸಮ್ಮತಿ ನೀಡಿತ್ತು.
ಗುಜರಾತ್ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಕುಟುಂಬದ 7 ಮಂದಿಯನ್ನು ಕೊಂದ ಆರೋಪಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿತ್ತು. ಗುಜರಾತ್ ಸರ್ಕಾರ ಸನ್ನಡತೆಯ ಆಧಾರದ ಮೇಲೆ ಅವರನ್ನು ಸನ್ನಡತೆಯ ಆಧಾರದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.