Advertisement

ಬಿಲ್ಕಿಸ್‌ ಅತ್ಯಾಚಾರ ಪ್ರಕರಣ: ಗುಜರಾತ್‌ ಸರ್ಕಾರಕ್ಕೆ ನೋಟಿಸ್‌

10:36 PM Aug 25, 2022 | Team Udayavani |

ನವದೆಹಲಿ/ಚೆನ್ನೈ: ಬಿಲ್ಕಿಸ್‌ ಬಾನೋ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾ ದವರನ್ನು ಬಿಡುಗಡೆ ಮಾಡಿದ್ದಕ್ಕೆ ಕೇಂದ್ರ, ಗುಜರಾತ್‌ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

Advertisement

2 ವಾರಗಳ ಒಳಗಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿ ಮೂವರು ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿದ್ದಾರೆ. ಇದೇ ವೇಳೆ, ಬಿಜೆಪಿ ನಾಯಕಿ ಖುಷುº ಸುಂದರ್‌ ಅಪರಾಧಿಗಳ ಬಿಡುಗಡೆಗೆ ಆಕ್ಷೇಪಿಸಿ ಟ್ವೀಟ್‌ ಮಾಡಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ವನತಿ ಶ್ರೀನಿವಾಸ್‌ “ಅವರ ಅಭಿಪ್ರಾಯಕ್ಕೆ ಗೌರವ ಇದೆ. ಕಾನೂನಿನ ಅನ್ವಯವೇ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next