Advertisement
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್. ಪೂಜಾರಿ ಅವರು ಮಾತನಾಡಿ, ಅಸೋಸಿಯೇಶನ್‌ನ ಸಮಗ್ರ ಯೋಜನೆಗಳನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈ ಎಲ್ಲಾ ಯೋಜನೆಗಳು ನಮ್ಮ ಸಮಾಜದ ನಾಯಕರಾದ ಜಯ ಸಿ. ಸುವರ್ಣರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು, ನಾವೆಲ್ಲರೂ ಸಮಾಜದ ಅಭಿವೃದ್ಧಿಗೆ ದುಡಿಯೋಣ. ನಮಗೆ ಜಯ ಸಿ. ಸುವರ್ಣರು ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸೋಣ ಎಂದರು.
Related Articles
Advertisement
ವೇದಿಕೆಯಲ್ಲಿ ಅಸೋಸಿಯೇಶನ್ ಉಪಾಧ್ಯಕ್ಷರುಗಳಾದ ಶಂಕರ್ ಡಿ. ಪೂಜಾರಿ, ಹರೀಶ್ ಜಿ. ಅಮೀನ್, ದಯಾನಂದ ಪೂಜಾರಿ, ಶ್ರೀನಿವಾಸ್ ಆರ್. ಕರ್ಕೇರ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಜಗದೀಶ್ ಅಮೀನ್, ನಿರ್ಗಮನ ಕಾರ್ಯಾಧ್ಯಕ್ಷ ಕೋಡಿ ಗೋಪಾಲ್ ಪೂಜಾರಿ, ಕಾರ್ಯಾಧ್ಯಕ್ಷ ದಯಾನಂದ ಬೋಂಟ್ರಾ, ಉಪ ಕಾರ್ಯಾಧ್ಯಕ್ಷ ಕಮಲಾಕರ ಆರ್. ಸುವರ್ಣ, ಕೋಶಾಧಿಕಾರಿ ಮಲ್ಲಿಕಾ ಆರ್. ಪೂಜಾರಿ ಹಾಗೂ ಕೇಂದ್ರ ಕಚೇರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ಸದಸ್ಯೆಯರು ಪ್ರಾರ್ಥನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಮಲ್ಲಿಕಾ ಆರ್. ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜತೆ ಕಾರ್ಯದರ್ಶಿ ರಘುರಾಮ ಎ. ಸಾಲ್ಯಾನ್ ವಂದಿಸಿದರು. ದೇವಕಿ ಸದಾಶಿವ ಕರ್ಕೇರ ಅವರ ವತಿಯಿಂದ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.