Advertisement

“ಬಿಲ್ಲವರು ಸರಕಾರಿ ಸವಲತ್ತು ಪಡೆಯಲು ಮುಂದಾಗಬೇಕು’

05:03 PM Jun 08, 2019 | Team Udayavani |

ಮುಂಬಯಿ: ವಿವಿಧ ಸಂಘಟನೆಗಳನ್ನು ಸ್ಥಾಪಿಸಿಕೊಂಡು ಹಂಚಿ ಹೋಗಿರುವ ಬಿಲ್ಲವರು ಒಂದೇ ವೇದಿಕೆಯಡಿಯಲ್ಲಿ ಒಟ್ಟಾಗಿ ಸರಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆಯಲು ಹೋರಾಡಬೇಕು. ಸರಕಾರವು ಎಲ್ಲಾ ಹಿಂದುಳಿದ ವರ್ಗ, ಪಂಗಡಗಳ ಅಭಿವೃದ್ಧಿಗಾಗಿ ಸಾಕಷ್ಟು ಸವಲತ್ತುಗಳನ್ನು ಕಾಯ್ದಿರಿಸಿದೆ. ಆದರೆ ಅದನ್ನು ಪಡೆಯಲು ಸೂಕ್ತ ರೀತಿಯಲ್ಲಿ ಪ್ರಯತ್ನ ಆಗುತ್ತಿಲ್ಲ. ನಾನು ಈ ಸವಲತ್ತುಗಳನ್ನು ಸಮರ್ಪಕವಾಗಿ ಸಿಗುವಂತೆ ಅನೇಕ ಬಾರಿ ಪ್ರಯತ್ನಿಸಿದ್ದೇನೆ ಎಂದು ಕರ್ನಾಟಕ ಸರಕಾರದ ಮಾಜಿ ಸಚಿವ, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Advertisement

ಜೂ. 3ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನಕ್ಕೆ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಅವರು ಸಭೆಯಲ್ಲಿ ಉಪಸ್ಥಿತರಿದ್ದ ಬಿಲ್ಲವರ ಅಸೋಸಿಯೇಶನ್‌ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ನಾರಾಯಣ ಗುರುಗಳ ಸಂದೇಶದಂತೆ, ಒಗ್ಗಟ್ಟಿನಲ್ಲಿ ಬಲವಿದೆ ಎಂಬುವುದನ್ನು ನಾವು ತೋರಿಸಿಕೊಡಬೇಕಾಗಿದೆ. ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿಯವರು ಬಿಲ್ಲವ ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಆ ಆದರ್ಶವನ್ನು ನಾವು ಮುಂದುವರಿಸಿಕೊಂಡು ಹೋಗಬೇಕು. ಕೋಟಿ-ಚೆನ್ನಯರ ಗರಡಿಗಳಿಗೆ ಸಂಬಂಧಿಸಿ ಎಷ್ಟೋ ಎಕರೆ ಜಾಗ ಪಾಳು ಬಿದ್ದಿದೆ. ಇದನ್ನು ಸೂಕ್ತ ರೀತಿಯಲ್ಲಿ ನೋಂದಣಿಗೊಳಿಸಿ ಅಭಿವೃದ್ಧಿ ಪಡಿಸಲು ನಾವು ಪ್ರಯತ್ನಶೀಲರಾಗಬೇಕು. ಮುಂಬಯಿಯ ಬಿಲ್ಲವರ ಅಸೋಸಿಯೇಶನ್‌ ಜಯ ಸಿ. ಸುವರ್ಣ ಅವರ ನೇತೃತ್ವದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿರುವುದು ಅಭಿಮಾ ನದ ಸಂಗತಿಯಾಗಿದೆ ಎಂದು ನುಡಿದು ಅಸೋಸಿಯೇಶನ್‌ನ ಸಮಾಜಪರ ಕಾರ್ಯಕ್ರ ಮಗಳನ್ನು ಅಭಿನಂದಿಸಿ ಶುಭಹಾರೈಸಿದರು.

ಪ್ರಾರಂಭದಲ್ಲಿ ನಾರಾಯಣ ಗುರುಗಳ ಮೂರ್ತಿಗೆ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಾರ್ಥನೆಗೈದರು. ಬಿಲ್ಲವರ ಅಸೋಸಿಯೇಶನ್‌ನ ಉಪಾಧ್ಯಕ್ಷ ಶಂಕರ್‌ ಡಿ.ಪೂಜಾರಿ ಅವರು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಶಾಲು ಹೊದೆಸಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹರೀಶ್‌ ಜಿ. ಅಮೀನ್‌, ಶ್ರೀನಿವಾಸ ಆರ್‌. ಕರ್ಕೇರ, ಜೊತೆ ಕಾರ್ಯದರ್ಶಿಗಳಾದ ಕೇಶವ ಕೆ. ಕೋಟ್ಯಾನ್‌, ರವೀಂದ್ರ ಎ. ಶಾಂತಿ, ಧರ್ಮೇಶ್‌ ಸಾಲ್ಯಾನ್‌, ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌, ಆಡಳಿತ ಸಮಿತಿಯ ಸದಸ್ಯರಾದ ಶಕುಂತಳಾ ಕೆ. ಕೋಟ್ಯಾನ್‌, ಸುಮಿತ್ರಾ ಎಸ್‌. ಬಂಗೇರ, ದಿನೇಶ್‌ ಅಮೀನ್‌, ನವೀನ್‌ ಬಂಗೇರ, ವಿಶ್ವನಾಥ ತೋನ್ಸೆ, ಅಶೋಕ್‌ ಸಸಿಹಿತ್ಲು, ಭಾರತ್‌ ಬ್ಯಾಂಕಿನ ನಿರ್ದೇಶಕರಾದ ಗಂಗಾಧರ ಜೆ. ಪೂಜಾರಿ, ಪ್ರೇಮನಾಥ ಪಿ. ಕೋಟ್ಯಾನ್‌ ಹಾಗೂ ಉನ್ನತಾಧಿಕಾರಿ ಡಾ| ಯು. ಧನಂಜಯ ಕುಮಾರ್‌, ಮೋಹನ್‌ದಾಸ್‌ ಹೆಜ್ಮಾಡಿ, ಗೀತಾಂಜಲಿ ಎಲ್‌. ಸಾಲ್ಯಾನ್‌, ಗೋಪಾಲ ಪಾಲನ್‌, ಸಂಜೀವ ಬಂಗೇರ, ಬಿಲ್ಲವರ ಭವನದ ಪ್ರಬಂಧಕ ಭಾಸ್ಕರ್‌ ಟಿ. ಪೂಜಾರಿ ಸೇರಿದಂತೆ ವಿವಿಧ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next