Advertisement

ಬಿಲ್ಲವರ ಅಸೋಸಿಯೇಶನ್‌ ಬೊರಿವಲಿ ಸ್ಥಳೀಯ ಸಮಿತಿಯ ವಿಹಾರ ಕೂಟ

03:38 PM Mar 01, 2019 | Team Udayavani |

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಬೊರಿವಲಿ ಸ್ಥಳೀಯ ಸಮಿತಿಯ ವಾರ್ಷಿಕ ವಿಹಾರ ಕೂಟವು ಫೆ. 17ರಂದು ಅರ್ನಾಲಾ ಬೀಚ್‌ ರೆಸಾರ್ಟ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಸುಮಾರು 72 ಸದಸ್ಯರನ್ನೊಳಗೊಂಡ ತಂಡದವರು ಬೆಳಗ್ಗೆಯಿಂದ ರಾತ್ರಿಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸದಸ್ಯ ಬಾಂಧವರಿಗೆ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಬಿಲ್ಲವರ ಅಸೋಸಿಯೇಶನ್‌ ಬೊರಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ಇತ್ತೀಚೆಗೆ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಆಯೋಜಿಸಿದ್ದ ಕೋಟಿ-ಚೆನ್ನಯ ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಿಗಳನ್ನು ಇದೇ ಸಂದರ್ಭದಲ್ಲಿ ಸಮಿತಿಯ ವತಿಯಿಂದ ಗೌರವಿಸಲಾಯಿತು.

ಮಹಿಳಾ ವಿಭಾಗದ ಸದಸ್ಯೆಯರು ಆಟೋಟಗಳಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಬಿಲ್ಲವರ ಅಸೋಸಿಯೇಶನ್‌ ಬೊರಿವಲಿ ಸ್ಥಳೀಯ ಸಮಿತಿಯ ಸರ್ವ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದವರು, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next