ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯು ಮಾ. 8ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅವರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಸೇವಕಿ, ಅಸೋಸಿಯೇಶನ್‌ನ ಶುಭಮಂಗಳ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಎಸ್. ಕುಕ್ಯಾನ್ ಮತ್ತು ಶ್ಯಾಮ ಕುಕ್ಯಾನ್ ದಂಪತಿಯನ್ನು ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕಿ ಪ್ರವೀಣಿ ಡಿ. ಸಾಲ್ಯಾನ್ ಮತ್ತು ದಯಾನಂದ ಸಾಲ್ಯಾನ್, ಪುತ್ರಿ ಭೂಮಿಕಾ ಸಾಲ್ಯಾನ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಅಭಿನಂದಿಸಲಾಯಿತು.
ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ, ಮಕ್ಕಳ ಮನಃಶಾಸ್ತ್ರಜ್ಞೆ ಡಾ| ಮೇಘಾ ಭಯಾನಿ, ಭಾರತ್ ಬ್ಯಾಂಕ್‌ನ ಉಪ ಕಾರ್ಯಾಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ. ಸಾಲ್ಯಾನ್, ವಿದ್ಯಾ ರಾಜಾ ಸಾಲ್ಯಾನ್, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ರಾಜ ವಿ. ಸಾಲ್ಯಾನ್, ಭಾಸ್ಕರ ವಿ. ಬಂಗೇರ, ಶಂಕರ ಡಿ.ಪೂಜಾರಿ ಮತ್ತು ಡಾ| ಯು. ಧನಂಜಯ ಕುಮಾರ್, ಗೌ| ಪ್ರ| ಕೋಶಾಧಿಕಾರಿ ಮಹೇಶ್ ಸಿ. ಕಾರ್ಕಳ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆಯರಾದ ವಿಲಾಸಿನಿ ಕೆ. ಸಾಲ್ಯಾನ್, ಪ್ರಭಾ ಕೆ. ಬಂಗೇರ, ಗೌ| ಪ್ರ| ಕಾರ್ಯದರ್ಶಿ ಸುಮಿತ್ರಾ ವಿ. ಬಂಗೇರ, ಜೊತೆ ಕಾರ್ಯದರ್ಶಿ ಲಕ್ಷ್ಮೀ ಎಸ್. ಪೂಜಾರಿ, ಅಸೋಸಿಯೇಶನ್‌ನ
ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್, ಮಹಿಳಾ ವಿಭಾಗದ ಜೊತೆ ಕಾರ್ಯದರ್ಶಿ ಡಾ| ಗೀತಾಂಜಲಿ ಎಲ್. ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್