Advertisement

ಬಿಮಾ ಯೋಜನೆ ಅನುಷ್ಠಾನ

03:10 PM Jun 30, 2020 | Suhan S |

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಎಲ್‌.ಐ. ರೂಡಗಿ ತಿಳಿಸಿದ್ದಾರೆ.

Advertisement

ತಾಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಪಂ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿ ಸೂಚಿಸಲಾಗಿದೆ. ಅಧಿಸೂಚಿತ ಬೆಳೆಗೆ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಹಾಗೂ ಕೀಟ ರೋಗದಿಂದ ವಿಫಲವಾದಲ್ಲಿ ವಿಮಾ ರಕ್ಷಣೆ ಒದಗಿಸಲಾಗುವುದು. ಮಳೆ ಅಭಾವ ಅಥವಾ ಇತರ ಪ್ರತಿಕೂಲ ಹವಾಮಾನದಿಂದ ಅ ಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲವಾದಲ್ಲಿ ಹಾಗೂ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟಾಗ ಎರಡು ವಾರದೊಳಗೆ ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮೆ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆನಷ್ಟ ಪರಿಹಾರ ಕೊಡುತ್ತದೆ. ಈ ಯೋಜನೆಯಲ್ಲಿ ಪಾಲ್ಗೊಂಡು ಅಧಿ ಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸಬೇಕು ಎಂದು ಕೋರಿದ್ದಾರೆ.

ಪ್ರಸಕ್ತ ಸಾಲಿನಿಂದ ಈ ಯೋಜನೆಯು ಐಚ್ಛಿಕವಾಗಿದ್ದು ಬೆಳೆ ಸಾಲ ಪಡೆದ ರೈತರು ಯೋಜನೆಯಿಂದ ಹೊರಗುಳಿಯಬಹುದು. ಸಂಬಂಧಿಸಿದ ಬ್ಯಾಂಕ್‌ ವ್ಯವಸ್ಥಾಪಕರಿಗೆ ಲಿಖೀತವಾಗಿ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆ ಪತ್ರವನ್ನು 7 ದಿನ ಮುಂಚಿತವಾಗಿ ನೀಡಿದಲ್ಲಿ ಅಂತಹ ರೈತರನ್ನು ವಿಮೆ ಯೋಜನೆಯಿಂದ ಕೈ ಬಿಡಲಾಗುವುದು. ರೈತರು ತಮ್ಮ ವ್ಯಾಪ್ತಿಯ ಬ್ಯಾಂಕ್‌, ಸರ್ಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಬಹುದು. ಮಾಹಿತಿಗಾಗಿ ಮೊ. 8105207118 ಸಂಪರ್ಕಿಸಬಹುದು. ಪ್ರಸಕ್ತ ಹಂಗಾಮಿನಲ್ಲಿ ರೈತರು ಈ ಬೆಳೆ ವಿಮೆಯಲ್ಲಿ ಪಾಲ್ಗೊಳ್ಳಲು ಹೆಸರು (ಮಳೆ ಆಶ್ರಿತ) ಬೆಳೆಗೆ ಜು.15 ಹಾಗೂ ಉಳಿದ ಎಲ್ಲಾ ಬೆಳೆಗಳಿಗೆ ಜು.31, 2020 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next