Advertisement
ಶುಕ್ರವಾರ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಒಳಗೊಂಡ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಬಾಣಂತಿಯರ ಸರಣಿ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದೆ.ದೂರಿನಲ್ಲೇನಿದೆ?
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇತ್ತೀಚೆಗೆ ತಜ್ಞರ ಸಮಿತಿಯೊಂದು ರಚಿಸಿ ಬಾಣಂತಿಯರ ಸಾವಿಗೆ ಕಾರಣ ಪತ್ತೆ ಹಚ್ಚುವಂತೆ ತಿಳಿಸಿತ್ತು. ಅದರಂತೆ ತಜ್ಞರ ಸಮಿತಿಯೂ ಬಾಣಂತಿಯರ ಸಾವಿಗೆ ಐವಿ ಗ್ಲುಕೋಸ್ ಕಾರಣ ಎಂಬ ವರದಿ ಬಹಿರಂಗಗೊಂಡಿತ್ತು.
Related Articles
ಕೊಲೆಗಡುಕ ಕಾಂಗ್ರೆಸ್ ಸರಕಾರದಿಂದ ಬಳ್ಳಾರಿಯಲ್ಲಿ ಮತ್ತೊಬ್ಬ ಬಾಣಂತಿ ಮಹಿಳೆ ಮಗು ಸಾವು ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಿಮಗೆ ಮಾನವೀಯತೆ ಇದೆಯಾ? ನಿಮಗೆ ಮನುಷ್ಯತ್ವ ಇದೆಯಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
Advertisement
ಬಳ್ಳಾರಿಯಲ್ಲಿ ಕಳಪೆ ಔಷಧಿಯಿಂದ ಮತ್ತೊಬ್ಬ ಬಾಣಂತಿ, ಮಗುವಿನ ಸಾವಾಗಿದೆ. ನೀವು ಮಾಡಿದ ಕಾಟಾಚಾರದ ಸಭೆಗಳಿಂದ ಯಾವ ಪ್ರಯೋಜನವೂ ಆಗಿಲ್ಲ. ಇಷ್ಟಾದರೂ ತಾವಾಗಲಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಲಿ ಬಳ್ಳಾರಿಗೆ ಭೇಟಿ ನೀಡಿಲ್ಲ. ನಿಮ್ಮನ್ನ ಕೊಲೆಗಡುಕ ಸರಕಾರ ಅನ್ನದೆ ಇನ್ನೇನು ಅನ್ನಬೇಕು? ಬಡ ಕುಟುಂಬದ ಮಹಿಳೆಯರಿಗೆ, ಮಕ್ಕಳಿಗೆ ಮೊದಲು ಜೀವದ ಗ್ಯಾರಂಟಿ ಕೊಡಿ. ಬದುಕುವ ಭಾಗ್ಯ ಕೊಡಿ. ತಾವು ಬಳ್ಳಾರಿಗೆ ಭೇಟಿ ಕೊಡಲು ಇನ್ನು ಎಷ್ಟು ಮಹಿಳೆಯರು, ಹಸುಗೂಸುಗಳ ಹೆಣ ಬೀಳಬೇಕು? ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.