Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚಾಗಲು ಐವಿ ದ್ರಾವಣ ಕಾರಣವೆಂದು ಹೇಳಲಾಗುತ್ತಿದೆ ಐವಿ ದ್ರಾವಣ ಮಾದರಿ ಪರೀಕ್ಷಿಸಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದರೂ ಪಕ್ಕದ ರಾಜ್ಯಗಳಲ್ಲಿ ಯಾಕೆ ಈ ರೀತಿಯ ಸಮಸ್ಯೆಯಾಗಲಿಲ್ಲ. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆಯಲ್ವಾ? ಅಲ್ಲಿ ಯಾಕೆ ಈ ರೀತಿಯ ಸಮಸ್ಯೆ ಆಗಿಲ್ಲ ಎಂದು ಜೋಶಿ ಪ್ರಶ್ನಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಇಲಾಖೆಗೆ ಮೇಲೆ ಹಿಡಿತವಿಲ್ಲ, ಸಂಪೂರ್ಣ ವಿಫಲರಾಗಿದ್ದಾರೆ. ಆರೋಗ್ಯ ಸಚಿವರು ಬರೀ ಮುಖ್ಯಮಂತ್ರಿ ಹಿಂದೆ ಓಡಾಡಿಕೊಂಡಿದ್ದಾರೆ ಎಂದು ಟೀಕಿಸಿದರು.
ನಬಾರ್ಡ್ನಿಂದ ರಾಜ್ಯಕ್ಕೆ ಹಣ ಕಡಿಮೆ ಮಾಡಿಲ್ಲ. ಈ ವಿಚಾರದಲ್ಲಿ ಸಿಎಂ ಸುಳ್ಳು ಹೇಳಿದ್ದಾರೆ. ಬ್ಯಾಂಕ್ಗಳು ಕೃಷಿ ವಲಯಕ್ಕೆ ಉತ್ತಮವಾಗಿಯೇ ಸಾಲ ಕೊಡುತ್ತಿವೆ. ರಾಷ್ಟ್ರೀಯ ಬ್ಯಾಂಕ್ಗಳು, ಸಹಕಾರ ಬ್ಯಾಂಕ್ಗಳು ಶೇ.4 ಬಡ್ಡಿ ದರದಲ್ಲೇ ಸಾಲ ಕೊಡುವುದು. ಆದರೆ ಸಿಎಂ ಶೇ.7 ರಲ್ಲಿ ಸಾಲ ಕೊಡುತ್ತಿವೆ ಅಂತ ಸುಳ್ಳು ಹೇಳಿದ್ದಾರೆ. ಪ್ರಶ್ನೆ ಕೇಳಿದರೆ ಪತ್ರಕರ್ತರಿಗೆ ಸಿಎಂ ಬೆದರಿಸುತ್ತಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಾರೆ. ಇವರು ಸುಳ್ಳುಗಾರ ಸಿದ್ದರಾಮಯ್ಯ. ಸುಳ್ಳು ಹೇಳುವುದರಲ್ಲಿ ಇವರಿಗೆ ನೊಬೆಲ್ ಸಿಗಬೇಕು. ಇಂತಹ ಸುಳ್ಳು ಹೇಳುವ ಸಿಎಂ ಅನ್ನು ರಾಜ್ಯ ಹಿಂದೆ ಕಂಡಿಲ್ಲ ಎಂದು ಕಿಡಿಕಾರಿದ್ದಾರೆ. ಸಾಂವಿಧಾನಿಕ ಹುದ್ದೆಗೆ ಅಪಮಾನ:
ರಾಜ್ಯಪಾಲರೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೂ ನೈತಿಕವಾಗಿ ಅವತ್ತೇ ರಾಜೀನಾಮೆ ಕೊಡಬೇಕಿತ್ತು. ರಾಜ್ಯಪಾಲರಿಗೆ, ಸಾಂವಿಧಾನಿಕ ಹುದ್ದೆಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ. ರಾಹುಲ್ ಗಾಂಧಿ ತಲೇನೂ ಖಾಲಿ, ಅವರು ಹಿಡಿದ ಸಂವಿಧಾನದ ಪುಸ್ತಕವೂ ಖಾಲಿ ಎಂದು ಜೋಶಿ ಹೇಳಿದ್ದಾರೆ.