Advertisement

ಅರ್ಹರಿಗೆ ಸೌಲಭ್ಯ ಒದಗಿಸಲು ಬಯೋ ಮೆಟ್ರಿಕ್‌

12:17 PM Nov 28, 2017 | Team Udayavani |

ಬೆಂಗಳೂರು: ನಿಜವಾದ ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ಉದ್ದೇಶದಿಂದ ಬಯೋ ಮೆಟ್ರಿಕ್‌ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

Advertisement

ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್‌ಕುಮಾರ್‌ ಗಾಜಿನ ಮನೆ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಿ ಕನಿಷ್ಠ ವೇತನ ನೀಡುವ ಸರ್ಕಾರದ ಕ್ರಮಕ್ಕೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿರೋಧಿಸಿದ್ದವು. ಆದರೆ, ಸರ್ಕಾರ ಯಾವುದೇಕ್ಕೂ ಬೆದರದೆ ಅವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.

ಗುತ್ತಿಗೆ ಪೌರಕಾರ್ಮಿಕರ ಮಾದರಿಯಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ತೊಡಗಿರುವ ನಿರ್ವಹಣಾ ಸಿಬ್ಬಂದಿಗೂ (ಮೇಸಿŒ) ಕನಿಷ್ಠ ವೇತನ ಮತ್ತು ಕಾಯಂ ನೌಕರನ್ನಾಗಿಸಿ, ಪೌರಕಾರ್ಮಿಕರಿಗೆ ಲಭ್ಯವಿರುವ ಅನುಕೂಲಗಳು ಅವರಿಗೂ ದೊರೆಯುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಪಾಲಿಕೆಯಲ್ಲಿ ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಹಲವಾರು ಪಾರಂಪರಿಕ ಕಟ್ಟಡಗಳನ್ನು ಅಡವಿಟ್ಟು, ಸಾವಿರಾರು ಕೋಟಿ ರೂ. ಸಾಲ ಮಾಡಿ ಹೋಗಿದ್ದಾರೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರದಲ್ಲಿ ಪಾಲಿಕೆಯಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದ್ದು, ಅಡಮಾನವಿರಿಸಿದ ಕಟ್ಟಡಗಳನ್ನು ಬಿಡಿಸಿಕೊಳ್ಳಲಾಗುತ್ತಿದೆ.

Advertisement

ಜತೆಗೆ ಸರ್ಕಾರದಿಂದ ನೀಡಲಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ನಂತರ ಮಾತನಾಡಿದ ಮೇಯರ್‌ ಆರ್‌.ಸಂಪತ್‌ರಾಜ್‌, ಪೌರಕಾರ್ಮಿಕರಿಗೆ ಮನೆ ನೀಡುವ ಉದ್ದೇಶದಿಂದ ಒಂಟಿಮನೆ ಯೋಜನೆ ಜಾರಿಗೊಳಿಸಲಾಗಿದೆ. ಅದರಂತೆ ಪ್ರತಿ ವಾರ್ಡ್‌ನಲ್ಲಿ 10ರಿಂದ 15 ಮನೆಗಳನ್ನು ನೀಡಲಾಗುತ್ತದೆ.

ಆದರೆ, ಈವರೆಗೂ ಪೌರಕಾರ್ಮಿಕರು ಮನೆಗಾಗಿ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಮನೆಗಳನ್ನು ನೀಡಲಾಗುತ್ತಿಲ್ಲ. ಹೀಗಾಗಿ ಕೂಡಲೆ ಪೌರಕಾರ್ಮಿಕರು ಅರ್ಜಿ ಸಲ್ಲಿಸಿದರೆ ಮನೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ ಸೇರಿದಂತೆ ಪ್ರಮುಖರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next