Advertisement

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

11:18 PM Sep 18, 2024 | Team Udayavani |

ಹೊಸದಿಲ್ಲಿ: ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿ ಬೆಂಬಲಿಸಲು “ಜೈವಿಕ ತಂತ್ರಜ್ಞಾನ ಸಂಶೋಧನೆ, ಆವಿಷ್ಕಾರ ಮತ್ತು ಉದ್ಯಮಶೀಲತೆ ಅಭಿವೃದ್ಧಿ (ಬಯೋ-ರೈಡ್‌) ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

Advertisement

15ನೇ ಹಣಕಾಸು ಆಯೋಗದ ಅವಧಿಯಲ್ಲಿ 2021-22ರಿಂದ 2025-26ರವರೆಗೆ 9,197 ಕೋಟಿ ರೂ. ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ಹೇಳಿದ್ದಾರೆ.

ಕೈಗಾರಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಸಹಭಾಗಿತ್ವ, ಜೈವಿಕ-ಉತ್ಪಾದನೆ ಮತ್ತು ಜೈವಿಕ- ಫೌಂಡ್ರಿ ಎಂಬ ನೂತನ ಘಟಕಗಳೊಂದಿಗೆ ಆರ್‌ ಆ್ಯಂಡ್‌ ಡಿ ಮತ್ತು ಐ ಆ್ಯಂಡ್‌ ಇಡಿ ಯೋಜನೆಗಳನ್ನು ಸಂಯೋ ಜಿಸಲಿದೆ. ಜತೆಗೆ ಸ್ಟಾರ್ಟ್‌ಅಪ್‌ಗ್ಳಿಗೆ ಬೆಂಬಲ ನೀಡಲಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.