Advertisement

ಓಝೋನ ಸಂರಕ್ಷಣೆಯಿಂದ ಜೀವ ಸಂಕುಲ ಉಳಿವು

01:32 PM Sep 22, 2022 | Team Udayavani |

ಜೇವರ್ಗಿ: ಸೂರ್ಯನಿಂದ ಹೊರಬರುವ ನೇರಳಾತೀತ ಕಿರಣಗಳಿಂದ ಭೂಮಿಯನ್ನು ರಕ್ಷಿಸುವ ಮೂಲಕ ಓಝೋನ್‌ ಪದರು ಸರ್ವ ಜೀವಿಗಳ ರಕ್ಷಾ ಕವಚವಾಗಿದೆ. ಇಂದು ಕೆಲವು ಕಾರಣಗಳಿಂದ ಇದು ಅಪಾಯ ಎದುರಿಸುತಿದ್ದು, ಅದರ ರಕ್ಷಣೆ ಮೂಲಕ ಜೀವ ಸಂಕುಲದ ಉಳಿವು ಸಾಧ್ಯವಿದೆ ಎಂದು ಉಪನ್ಯಾಸಕ, ಚಿಂತಕ ಎಚ್‌.ಬಿ.ಪಾಟೀಲ ಅಭಿಮತ ವ್ಯಕ್ತಪಡಿಸಿದರು.

Advertisement

ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್‌.ಎಸ್‌.ಎಸ್‌ ಘಟಕದ ಸಹಯೋಗದೊಂದಿಗೆ ಭೌತಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಲಾಗಿದ್ದ “ವಿಶ್ವ ಓಝೋನ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಓಝೋನ್‌ ಪದರು ನಾಶವಾಗಿ ನೇರಳಾತೀತ ಕಿರಣಗಳು ಮಾನವನಿಗೆ ತಾಕಿದರೆ ಚರ್ಮರೋಗ, ಕಣ್ಣಿನ ದೋಷ, ಗಂಟಲಿನಲ್ಲಿ ಕೆರೆತ, ಕ್ಯಾನ್ಸರ್‌, ರೋಗ ನಿರೋಧಕ ಶಕ್ತಿಯ ಕುಗ್ಗುವಿಕೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು, ದಟ್ಟವಾದ ಹೊಗೆ ಹೊರಹಾಕುವ ವಾಹನಗಳ ಬಳಕೆಯನ್ನು ತಗ್ಗಿಸಬೇಕು ಎಂದರು.

ಜೀವಶಾಸ್ತ್ರ ಉಪನ್ಯಾಸಕಿ ಶರಣಮ್ಮ ಭಾವಿಕಟ್ಟಿ ಮಾತನಾಡಿ, ಒಝೋನ್‌ ಪದರಿನ ಮಹತ್ವವನ್ನು ಎಲ್ಲರಿಗೂ ತಿಳಿಸುವ ಮೂಲಕ ಜಾಗೃತಿ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಬಳಗದ ಕಾರ್ಯ ಅಮೋಘವಾಗಿದೆ ಎಂದು ಹೇಳಿದರು.

ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪೂಕರ್‌, ರವೀಂದ್ರಕುಮಾರ ಬಟಗೇರಿ, ನಯಿಮಾ ನಾಹಿದ್‌, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೆಟಿ, ದೇವೇಂದ್ರಪ್ಪ ಬಡಿಗೇರ, ಸಿದ್ದಾರೂಢ ಬಿರಾದಾರ, ರಂಜಿತಾ ಠಾಕೂರ, ಪ್ರ.ದ.ಸ ನೇಸರ ಎಂ.ಬೀಳಗಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next