Advertisement
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಿಹಾರ ಮೂಲದ ಮೂವರನ್ನು ಬಂಧಿಸಿ ಪಂಚನಾಮೆ ನಡೆಸಲಾಗಿದೆ. ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬಿಹಾರದ 3ರಿಂದ 4 ತಂಡಗಳು ಬಯೋಮೆಟ್ರಿಕ್ ಮಾಹಿತಿ ಕಳವು ಮಾಡಿ ವಂಚಿಸುವ ಕೃತ್ಯದಲ್ಲಿ ತೊಡಗಿಕೊಂಡಿರುವುದು ತನಿಖೆ ವೇಳೆ ಗೊತ್ತಾಗಿದೆ. ತಲೆಮರೆಸಿಕೊಂಡಿರುವ ಸೂತ್ತಧಾರ ಆಸ್ತಿ ನೋಂದಣಿಗೆ ಸಂಬಂಧಿಸಿದ ಕಾವೇರಿ-2.0 ತಂತ್ರಜ್ಞಾನದಿಂದ ಮಾಹಿತಿಯನ್ನು ಕದ್ದು ಇತರ ಆರೋಪಿಗಳಿಗೆ ನೀಡುತ್ತಿದ್ದ. ಇತರ ಆರೋಪಿಗಳು ಎಇಪಿಎಸ್ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದರು. ಇದೇ ರೀತಿ ಬೇರೆ ರಾಜ್ಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೂಡ ಕಳವು ಮಾಡಿದ್ದಾರೆ. ಹಾಗಾಗಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೆ ಹಾಗೂ ಆಂಧ್ರ ಮತ್ತು ತಮಿಳುನಾಡು ಪೊಲೀಸರಿಗೂ ಪತ್ರ ಬರೆಯಲಾಗಿದೆ ಎಂದು ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.