Advertisement
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಆರ್ ಡಿಓ ಹಾಗೂ ಹಲವಾರು ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಅವರ ಪ್ರೇರಣೆಯೂ ಇದೆ. ಹೊಸ ಆವಿಷ್ಕಾರ, ಉಪಕರಣಗಳನ್ನು ತಯಾರು ಮಾಡಿ ಸೇನೆಗಳಿಗೆ ಸರಬರಾಜು ಮಾಡುವುದಷ್ಟೇ ಅಲ್ಲ, ಖಾಸಗಿ ವಲಯದಲ್ಲಿಯೂ ಉತ್ಪಾದನೆ ಮಾಡಲು ಜ್ಞಾನವನ್ನು ವರ್ಗಾಯಿಸಿ ಬಹಳ ಪ್ರೋತ್ಸಾಹ ನೀಡಿದ್ದರು ಎಂದರು.
Related Articles
Advertisement
ಜೀವನ ಚರಿತ್ರೆ ಪ್ರೇರಣಾದಾಯಕ: ಅವರ ಸೇವೆಯನ್ನು ಗುರುತಿಸಿಯೇ ನಮ್ಮ ಪ್ರಧಾನ ಮಂತ್ರಿಗಳು ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಇಡೀ ಭಾರತ ಒಬ್ಬ ನಾಯಕನನ್ನು ಕಳೆದುಕೊಂಡಿದೆ. ನಮ್ಮೆಲ್ಲರಿಗೂ ಅವರ ಜೀವನ ಚರಿತ್ರೆ ಪ್ರೇರಣಾದಾಯಕವಾಗಿದೆ. ಅವರ ತ್ಯಾಗ ಬಲಿದಾನಗಳ ಬಗ್ಗೆ ಮಕ್ಕಳಿಗೆ ತಿಳಿಸುವಂತಾಗಬೇಕು. ಮುಂದಿನ ಪೀಳಿಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅವರ ಕಾರ್ಯಕ್ರಮಗಳನ್ನು ಮುಂದುವರೆಸಿ ನಿಜವಾದ ಶ್ರದ್ದಾಂಜಲಿಯನ್ನು ಸಲ್ಲಿಸಬೇಕು ಎಂದರು.
ಕರ್ನಾಟಕದೊಂದಿಗೆ ಸಂಬಂಧ: ಕರ್ನಾಟಕದೊಂದಿಗೆ ಅವರು ಅವಿನಾಭಾವ ಸಂಬಂಧ ಹೊಂದಿದ್ದರು. ಕೊಡಗಿನೊಂದಿಗೆ ವಿಶೇಷ ಸಂಬಂಧ ಅವರಿಗಿತ್ತು. ಜನರಲ್ ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ಅಪಾರ ಗೌರವವಿತ್ತು. ಅವರ ಶೌರ್ಯವನ್ನು ಪದೇ ಪದೇ ಹೇಳುತ್ತಿದ್ದರು. ಇಲ್ಲಿನ ಜನರು ಹಾಗೂ ಸೈನಿಕರ ಬಗ್ಗೆ ಪ್ರೀತಿಯನ್ನು ಹೊಂದಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.