Advertisement

ಹಕ್ಕಿ ಜ್ವರ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ : ಸಚಿವ ಪ್ರಭು ಚವ್ಹಾಣ್ ಸೂಚನೆ

05:38 PM Jan 06, 2021 | Team Udayavani |

ಬೆಂಗಳೂರು : ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿ ಜ್ವರ (H5N8) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೈ – ಅಲರ್ಟ್ ಘೋಷಿಸಿದ್ದು, ಕೋಳಿ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಿದ್ದತೆ ಮಾಡಿಕೊಳ್ಳಿ ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪಶುವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

Advertisement

ಇದುವರೆಗೆ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ, ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಪನಿರ್ದೇಶಕರುಗಳು ಕೋಳಿ ಜ್ವರದ ಸಂಭಾವ್ಯ ರೋಗೋದ್ರೇಕವನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ರೋಗ ನಿಯಂತ್ರಣ ಸಮಿತಿಯ ಸಭೆ ನಡೆಸಿ ಸೂಕ್ತ ಮುಂಜಾಗ್ರತ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ:ಕಳವು ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದ ಕಾನ್ಸ್‌ಟೇಬಲ್‌ ಮೇಲೆ ಮಾರಣಾಂತಿಕ ಹಲ್ಲೆ

ಕೇರಳ ರಾಜ್ಯದ ಗಡಿ ಭಾಗದಲ್ಲಿ ಕೂಡಲೇ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ ಕೇರಳ ರಾಜ್ಯದಿಂದ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸುವುದು ಹಾಗೂ, ಕೇರಳ ರಾಜ್ಯದಿಂದ ಒಳ ಬರುವ ಕೋಳಿ ಸಾಗಾಣಿಕೆ ವಾಹನಗಳನ್ನು ನೈರ್ಮಲ್ಯೀಕರಿಸಿ (disinfection /Sanitization) ಒಳಬಿಡಲು ಸೂಚನೆ ನೀಡಲಾಗಿದೆ. ಅಲ್ಲದೇ ತೆಗೆದುಕೊಂಡ ಕ್ರಮಗಳ ದೈನಂದಿನ ವರದಿಯನ್ನು ಉಪನಿರ್ದೇಶಕರು, ಕೋಳಿ ರೋಗ ನಿರ್ಣಯ ಪ್ರಯೋಗಾಲಯದ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next