Advertisement

ವಿಶ್ವೇಶ್ವರಯ್ಯ ಜನ್ಮ ಜಯಂತಿ: ಸಮಾಧಿಗೆ ಪುಪ್ಪಾಲಂಕಾರ, ವೀಕ್ಷಣೆಗೆ ಜನ ಸಾಗರ

01:28 PM Sep 15, 2019 | keerthan |

ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ಎಂಜನಿಯರ್ ಸರ್.ಎಂ.ವಿಶೇಶ್ವರಯ್ಯ ರವರ 159 ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಜನ್ಮ ಸ್ಥಳವಾದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ.

Advertisement

ಮುದ್ದೇನಹಳ್ಳಿಯಲ್ಲಿರುವ ಸರ್.ಎಂ.ವಿಶೇಶ್ವರಯ್ಯ ಸಮಾಧಿಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ಹುಟ್ಟುಹಬ್ಬದ ಪ್ರಯುಕ್ತ ಆಕರ್ಷಣೆಯವಾಗಿ ಪುಪ್ಪಾಲಂಕಾರ ಮಾಡಿದ್ದು ಬೆಳಗ್ಗೆಯಿಂದಲೇ ರಾಜ್ಯದ ಮೂಲೆ ಮೂಲೆಗಳಿಂದ ಸರ್.ಎಂ.ವಿ. ಅಭಿಮಾನಿಗಳು ಅದರಲ್ಲೂ ವಿಶೇಷವಾಗಿ ಎಂಜಿನಿಯರ್‌ಗಳು, ರಾಜ್ಯದ ವಿವಿಧ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ಎಂಜಿನಿಯರಿಂಗ್ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಸಮಾಧಿ ಸ್ಥಳಕ್ಕೆ ಆಗಮಿಸಿ ಪುಪ್ಪ ನಮನ ಸಲ್ಲಿಸುತ್ತಿದ್ದಾರೆ.

ವಸ್ತು ಸಂಗ್ರಾಲಯ ವೀಕ್ಷಣೆ
ಮುದ್ದೇನಹಳ್ಳಿ ಗ್ರಾಮದಲ್ಲಿರುವ ಸರ್.ಎಂ.ವಿಶೇಶ್ವರಯ್ಯನವರ ಜೀವನದ ಬಗ್ಗೆ ಬೆಳಕು ಚೆಲ್ಲುವತಂಹ ವಸ್ತು ಸಂಗ್ರಹಾಲಯವನ್ನು ಪ್ರವಾಸಿಗರು, ಎಂಜನಿಯರಿಂಗ್ ವಿದ್ಯಾರ್ಥಿಗಳು ವೀಕ್ಷಿಸಿದರು.

ಸರ್ವಧರ್ಮ ಪ್ರಾರ್ಥನೆ
ಮುದ್ದೇನಹಳ್ಳಿಯಲ್ಲಿರುವ ವಿಟಿಯು ಸಾತ್ನಕೋತ್ತರ ಕೇಂದ್ರದ ನೂರಾರು ವಿದ್ಯಾರ್ಥಿಗಳು, ಅಧ್ಯಾಪಕರು, ಸ್ಥಳೀಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ವಿದ್ಯಾರ್ಥಿಗಳು ಸಮಾಧಿ ಸ್ಥಳಕ್ಕೆ ಆಗಮಿಸಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿದರು.

ಜಿಪಂ ಸಿಇಒರಿಂದ ಪುಪ್ಪನಮನ
ಜಿಲ್ಲಾಡಳಿತದ ಪರವಾಗಿ ಜಿಲ್ಲಾ ಪಂಚಾಯರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರುನ್ನುಮ್ ಸೇರಿದಂತೆ ಹಲವರು ಆಗಮಿಸಿ ಪುಪ್ಪ ನಮನ ಸಲ್ಲಿಸಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next