Advertisement

ಜಯಚಾಮರಾಜೇಂದ್ರ ಒಡೆಯರ್‌ ಜನ್ಮಶತಾಬ್ಧಿ

12:59 AM Aug 04, 2019 | Lakshmi GovindaRaj |

ಬೆಂಗಳೂರು: ಜನಪರ ಕೆಲಸಗಳ ಜತೆಗೆ ಸಾಹಿತ್ಯ, ತತ್ವಶಾಸ್ತ್ರ ಹಾಗೂ ಕಲಾ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಮೈಸೂರಿನ ಜಯಚಾಮರಾಜೇಂದ್ರ ಒಡೆಯರ ಬಗ್ಗೆ ಇಂದಿನ ಪೀಳಿಗೆ ಮಾಹಿತಿಯೇ ಇಲ್ಲ ಎಂದು ಡಾ.ಪ್ರಧಾನ ಗುರುದತ್ತ ಕಳವಳ ವ್ಯಕ್ತಪಡಿಸಿದರು.

Advertisement

ಚಾಮರಾಜಪೇಟೆಯ ಸಾಹಿತ್ಯ ಪರಿಷತ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಯಚಾಮರಾಜೇಂದ್ರ ಒಡೆಯರ್‌ ಜನ್ಮಶತಾಬ್ಧಿ ಹಾಗೂ ನಾಲ್ವಾಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸ್ಕೃತದಲ್ಲಿ 94 ಕೃತಿ ರಚಿಸಿರುವ ಜಯಚಾಮರಾಜೇಂದ್ರ ಒಡೆಯರು ಪಾಶ್ಚಾತ್ಯ ಸಂಗೀತದಲ್ಲೂ ವಿಶೇಷ ಆಸಕ್ತಿ ಹೊಂದಿದ್ದರು. ಜನಪರ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದರು ಎಂದು ಬಣ್ಣಿಸಿದರು.

ಜಯಚಾಮರಾಜೇಂದ್ರ ಅವರ ಸಾಧನೆ ಮತ್ತು ನಾಡಿಗೆ ನೀಡಿದ ಕೊಡುಗೆಯನ್ನು ಇಂದಿನ ಪೀಳಿಗೆ ಅರಿಯುವ ಪ್ರಯತ್ನ ಮಾಡಬೇಕು. ಅರಸನಾಗಿದ್ದರೂ ಜನ ಸಾಮಾನ್ಯರೊಂದಿಗೆ ಬೆರೆಯುತ್ತಿದ್ದರು. ಸಾಮಾನ್ಯ ವಿದ್ಯಾರ್ಥಿಗಳೊಂದಿಗೆ ಬಿ.ಎ.ಪದವಿ ರ್‍ಯಾಂಕ್‌ನೊಂದಿಗೆ ಪೂರೈಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು. ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next