Advertisement

ಸಾಮಾಜಿಕ ಅಂತರ ಮರೆತು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಬರ್ತ್ ಡೇ ಪಾರ್ಟಿ!

09:22 PM Jul 07, 2020 | sudhir |

ಚಿಕ್ಕಬಳ್ಳಾಪುರ: ಕೋವಿಡ್-19 ನಿಯಂತ್ರಣಕ್ಕೆ ಇಡೀ ವಿಶ್ವವೇ ಹರಸಾಹಸ ಮಾಡುತ್ತಿದೆ, ರಾಜ್ಯದಲ್ಲಿ ಅಂತೂ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಇಟ್ಟು ಯಾರು ಮಾಸ್ಕ್ ಧರಿಸಿಕೊಳ್ಳದೇ ಸಿಬ್ಬಂದಿಯೊಬ್ಬರ ಬರ್ತ್ ಡೇ ಪಾರ್ಟಿ ಭರ್ಜರಿಯಾಗಿ ಆಚರಿಸುವ ಮೂಲಕ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

Advertisement

ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕೆಂಬ ನಿಯಮ ಇದ್ದರೂ ಜಿಲ್ಲಾಸ್ಪತ್ರೆಯಲ್ಲಿ ಯಾವುದನ್ನೂ ಲೆಕ್ಕಿಸದೇ ಜನ ಸಾಮಾನ್ಯರಿಗೆ ಬುದ್ದಿ ಹೇಳಬೇಕಾದ ಜಿಲ್ಲಾಸ್ಪತ್ರೆಯ ವೈದ್ಯರು, ಪ್ರಯೋಗಾಲಯ ಸಿಬ್ಬಂದಿ, ನೊಂದಣಿ ವಿಭಾಗದ ಸಿಬ್ಬಂದಿ ಸೇರಿ ಸಾಮಾಜಿಕ ಅಂತರ ಕಾಪಾಡದೇ ಹುಟ್ಟು ಹಬ್ಬ ಆಚರಿಸಿ ಕೇಕ್ ಕತ್ತರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ನೆಟ್ಟಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಕೋವಿಡ್-19 ವಿಚಾರದಲ್ಲಿ ಹೊರಡಿಸಿರುವ ಆದೇಶ, ಮಾರ್ಗಸೂಚಿಗಳು ಪಾಲನೆಯಲ್ಲಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಅನ್ವಯಿಸುವುದಿಲ್ಲವೇ, ಸಾಮಾನ್ಯ ಜನರಿಗೊಂದು? ಅಧಿಕಾರಿಗಳಿಗೆ ಒಂದು ಕಾನೂನು ಇರುತ್ತದೆಯೆ ಎಂದು ನೆಟ್ಟಿಗರು ಈ ಪೋಟೋಗಳನ್ನು ಆಪ್‌ಲೋಡ್ ಮಾಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next