ತುಮಕೂರು: ರೈತ ಪರವಾಗಿರುವ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ ಸೇರಿದಂತೆ ಹಲವು ರೈತ ಪರ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ತಮ್ಮ ರಾಜಕೀಯ ಉದ್ದೇಶ ದಿಂದ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಬಿ.ಸುರೇಶಗೌಡ ಕಿಡಿಕಾರಿದರು.
ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಬಿಜೆಪಿ ಘಟಕದಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ.ಅಟಲ್‌ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಹಾಗೂ ಕಿಸಾನ್ ಸಮ್ಮಾನಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ತಾವು ಬೆಳೆದಬೆಳೆಗಳನ್ನು ದೇಶದ ಯಾವುದೇ ಭಾಗದಲ್ಲಿ ಮಾರಾಟ ಮಾಡಲು ಮುಕ್ತ ಅವಕಾಶವನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದರು.
ಭಯ ಹುಟ್ಟಿಸಿರುವ ವಿರೋಧ ಪಕ್ಷಗಳು: ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳಲ್ಲಿಹಲವಾರು ರೈತಪರ ಕ್ರಾಂತಿಕಾರಕ ಅಂಶಗಳಿದ್ದರೂಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ರೈತರಿಗೆಇಲ್ಲ, ಸಲ್ಲದ ಭಯ ಹುಟ್ಟಿಸಿ, ತಪ್ಪುದಾರಿಗೆಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.
ತಕ್ಕ ಉತ್ತರ ನೀಡುವಂತೆ ಸಲಹೆ: ಕಳೆದ 7 ವರ್ಷಗಳಲ್ಲಿ ಕೇಂದ್ರದ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕಾರ್ಯನಿರ್ವಹಿಸಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಂತಹ ಪಕ್ಷಗಳು ಕೃಷಿ ಮಸೂದೆಗಳು ಅಪಾಯಕಾರಿಎಂಬ ವಿಷ ಬೀಜ ಭಿತ್ತಿ ಪ್ರತಿಭಟನೆಗೆ ಇಳಿಯುವಂತೆ ಮಾಡಿವೆ. ಹೊಸ ಕಾಯ್ದೆಯಲ್ಲಿರುವ ಒಳ್ಳೆಯ ಅಂಶಗಳನ್ನು ಕರಪತ್ರದಲ್ಲಿ ಮುದ್ರಿಸಿ ಹಂಚಿದ್ದು, ಇದನ್ನು ಓದಿದ ಪ್ರತಿಯೊಬ್ಬರು, ಕಾಯ್ದೆಯ ವಿರುದ್ಧ ಟೀಕೆ ಮಾಡುವವರಿಗೆ ತಕ್ಕ ಉತ್ತರ ನೀಡುವಂತೆ ಸಲಹೆ ನೀಡಿದರು. ಸರ್ಕಾರದ ಸವಲತ್ತುಗಳು ಆರ್ಹ ಫಲಾನುಭವಿಗೆ ತಲುಪದೆ ಅನ್ಯರ ಪಾಲಾಗುತ್ತಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ, ನೇರವರ್ಗಾವಣೆಯ ಮೂಲಕ ಸಾರ್ವಜನಿಕರ ಹಣ ಪೋಲಾಗದಂತೆ ಮಾಡಿದ್ದಾರೆ.
ರೈತರ ಖಾತೆಗಳಿಗೆ ಹಣ: ದೇಶದ 9 ಕೋಟಿ ರೈತರ ಖಾತೆಗಳಿಗೆ ತಲಾ 2 ಸಾವಿರದಂತೆ 18 ಸಾವಿರ ಕೋಟಿ ರೂ. ತಲುಪುವಂತೆ ಮಾಡಿದ್ದಾರೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು, ಬಿಗಿಯಾದ ನಿಯಮಗಳನ್ನುರೂಪಿಸಿದ ಪರಿಣಾಮ 11 ಸಾವಿರ ಇದ್ದ ಕೊಬ್ಬರಿ ಬೆಲೆ18 ಸಾವಿರ ರೂ.ಗೆ ಹೆಚ್ಚಳವಾಗಿದೆ. 22 ಸಾವಿರ ಇದ್ದ ಕ್ವಿಂಟಲ್ ಅಡಕೆ ಬೆಲೆ 33 ಸಾವಿರಕ್ಕೂ ಹೆಚ್ಚಾಗಿದೆ. ಇದು ರೈತರಿಗೆ ವರದಾನವಲ್ಲವೇ ಎಂದು ಪ್ರಶ್ನಿಸಿದ ಅವರು, ರೈತರು ವಿರೋಧಪಕ್ಷಗಳ ಮಾತುಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಷಡ್ಯಂತ್ರ: ಬಿಜೆಪಿ ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಮಾತನಾಡಿ, ಕೃಷಿ ತಜ್ಞರಾದ ಡಾ.ಸ್ವಾಮಿನಾಥನ್ ಅವರ ವರದಿಯಲ್ಲಿ ನಮೂದಿಸಿದ್ದ ಅಂಶಗಳನ್ನು ಮುಂದಿಟ್ಟುಕೊಂಡೆ
2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಹೊಸ ಕಾಯ್ದೆಗಳನ್ನು ಜಾರಿಗೆ ತಂದಿದೆ.ಅಲ್ಲದೆ ಸರ್ಕಾರ ಸಹ ಕಾಯ್ದೆಗಳನ್ನು ಲೋಪದೋಷಗಳನ್ನು ಸರಿಪಡಿಸಲು ಮುಕ್ತ ಮನಸ್ಸಿನಿಂದ ರೈತರನ್ನು ಆಹ್ವಾನಿಸಿ, ಮಾತುಕತೆ ನಡೆಸಿದೆ. 6 ಬಾರಿ ನಡೆದ ರೈತರೊಂದಿಗಿನ ಮಾತುಕತೆ ವಿಫಲವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕೆಲವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶಾರದ ನರಸಿಂಹಮೂರ್ತಿ, ಜಿಪಂ ಸದಸ್ಯ ಗೂಳೂರು ಶಿವಕುಮಾರ್, ಜಿಪಂ ಮಾಜಿ ಸದಸ್ಯ ರಾಮಚಂದ್ರಪ್ಪ, ಎಪಿಎಂಸಿ ಉಪಾಧ್ಯಕ್ಷ ಶಿವರಾಜು, ತಾಪಂ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ರೈತಮೋರ್ಚಾ ಜಿಲ್ಲಾ ಮಾಜಿ ಅಧ್ಯಕ್ಷ ಸ್ನೇಕ್ ನಂದೀಶ್, ಮುಖಂಡರಾದ ಓಂಕಾರ ಇತರರು ಇದ್ದರು.