Advertisement

ಹಸಿರುಕ್ರಾಂತಿ ಹರಿಕಾರ ಡಾ|ಬಾಬುಜೀ

03:54 PM Apr 06, 2020 | Suhan S |

ಬಳ್ಳಾರಿ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಂ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಸರಳವಾಗಿ ಆಚರಿಸಲಾಯಿತು.

Advertisement

ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಡಾ| ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಿಪಂ ಸಿಇಒ ಕೆ.ನಿತೀಶ್‌, ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಮಮತಾ, ಇಲಾಖೆ ಮ್ಯಾನೇಜರ್‌ ಅಂಬಿಕಾ, ಡಾ| ಬಾಬು ಜಗಜೀವನರಾಂ ಜನಜಾಗೃತಿ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಎಚ್‌.ಹುಲಗಣ್ಣ, ವಾರ್ಡನ್‌ ಶೇಖಣ್ಣ ಹಾಗೂ ಜಿಲ್ಲಾಧಿಕಾರಿ ಮತ್ತು ಸಮಾಜಕಲ್ಯಾಣ ಇಲಾಖೆ ಕಚೇರಿ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next