ಮಂಗಳೂರು: ಜಗತ್ತಿನಲ್ಲಿ ಭಾರತೀಯತೆಯನ್ನು ಎತ್ತಿ ಹಿಡಿದ ಮೇರು ವ್ಯಕ್ತಿ ಸ್ವಾಮಿ ವಿವೇಕಾನಂದರು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದರು.
Advertisement
ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ನಗರದ ರಥಬೀದಿಯ ಡಾ| ಪಿ. ದಯಾನಂದ ಪೈ, ಪಿ. ಸತೀಶ ಪೈ ಸರಕಾರಿ ಕಾಲೇಜಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ್ ಹೆಬ್ಟಾರ್ ಮಾತನಾಡಿ, ಯುವಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಿ ಸ್ಪಷ್ಟ ಗುರಿ ಹಾಗೂ ನಿರಂತರ ಪ್ರಯತ್ನದಿಂದ ಯಶಸ್ಸು ಪಡೆಯಲು ಸಾಧ್ಯ ಎಂದರು.
Related Articles
Advertisement
“ವಿವೇಕಾನಂದರ ಚಿಂತನೆಗಳಿಂದ ಸ್ಫೂರ್ತಿ’ಉಡುಪಿ: ಜಿಲ್ಲೆಯ ಯುವ ಜನತೆ ಬುದ್ಧಿವಂತರಾಗಿದ್ದರೂ ನಾಗರಿಕ ಸೇವೆ ಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿಲ್ಲ. ಅವರು ವಿವೇಕಾನಂದರ ಚಿಂತನೆಗಳಿಂದ ಸ್ಫೂರ್ತಿ ಪಡೆದು ನಾಗರಿಕ ಸೇವಾ ವಲಯ ದಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ಕಾರ್ಯನಿರ್ವಹಿಸ ಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ನಾಗರಿಕ ಸೇವಾ ಪರೀಕ್ಷೆ ಕುರಿತಂತೆ ಜಿಲ್ಲಾಡಳಿತದ ಮೂಲಕ ತರಬೇತಿ ಕಾರ್ಯ ಕ್ರಮ ಆಯೋಜಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಂಡು ನಾಗರಿಕ ಸೇವೆಯ ಮೂಲಕ ವಿವೇಕಾನಂದರ ಆಶಯ
ದಂತೆ ಉತ್ತಮ ಸಮಾಜ, ಸದೃಢ ದೇಶ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದರು. ವಿವೇಕಾನಂದರ ಚಿಂತನೆ ಪ್ರೇರಣೆ
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಮಾತನಾಡಿ, ನಾನು ನಾಗರಿಕ ಸೇವಾ ಪರೀಕ್ಷೆ ಎದುರಿಸಲು ವಿವೇಕಾನಂದರ ಚಿಂತನೆಗಳೇ ಪ್ರೇರಣೆ. “ನಿನ್ನನ್ನು ನೀನು ನಂಬು’ ಹಾಗೂ “ಎದ್ದೇಳು ಗುರಿ ಮುಟ್ಟುವವರೆಗೆ ನಿಲ್ಲದಿರು’ ಎಂಬ ಅವರ ಸ್ಫೂರ್ತಿದಾಯಕ ಮಾತುಗಳು ಸರ್ವಕಾಲಕ್ಕೂ ಸಮ್ಮತವಾಗಿವೆ. ಜಿಲ್ಲೆಯ ಯುವಜನತೆಯು ಜಿಲ್ಲಾಡಳಿತದ ಎಲ್ಲ ಕಾರ್ಯಗಳಿಗೆ ಉತ್ತಮ ಸಹಕಾರ ನೀಡುತ್ತಿದ್ದು, ಕ್ಲೀನ್ ಇಂಡಿಯಾ ಮತ್ತು ಫಿಟ್ ಇಂಡಿಯಾ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಸಹಕಾರ ನೀಡಿದ್ದಾರೆ. ಜಿಲ್ಲಾಡಳಿತ ಇತ್ತೀಚೆಗೆ ಆಯೋ ಜಿಸಿದ್ದ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗ ದೊರಕಿಸಲಾಗಿದೆ ಎಂದರು. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು. ನೆಹರೂ ಯುವ ಕೇಂದ್ರದ ಸಮನ್ವ ಯಾಧಿಕಾರಿ ವಿಲ್ಫೆ†ಡ್ ಡಿ’ಸೋಜಾ ಸ್ವಾಗತಿಸಿದರು. ಪ್ರಾಧ್ಯಾಪಕ ರಾಜೇಂದ್ರ ನಿರೂಪಿಸಿ, ವಂದಿಸಿದರು.