Advertisement

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನ

12:44 AM Jan 13, 2022 | Team Udayavani |

“ಯುವಜನತೆ ಭಾರತದ ರತ್ನಗಳಾಗಬೇಕು’
ಮಂಗಳೂರು: ಜಗತ್ತಿನಲ್ಲಿ ಭಾರತೀಯತೆಯನ್ನು ಎತ್ತಿ ಹಿಡಿದ ಮೇರು ವ್ಯಕ್ತಿ ಸ್ವಾಮಿ ವಿವೇಕಾನಂದರು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದರು.

Advertisement

ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ನಗರದ ರಥಬೀದಿಯ ಡಾ| ಪಿ. ದಯಾನಂದ ಪೈ, ಪಿ. ಸತೀಶ ಪೈ ಸರಕಾರಿ ಕಾಲೇಜಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ಯುವಜನತೆ ದುಶ್ಚಟಗಳಿಂದ ದೂರವಿದ್ದು, ಸ್ವಸ್ಥ  ಸಮಾಜದ ನಿರ್ಮಾಣಕ್ಕೆ ಕಟಿಬದ್ಧರಾಗ ಬೇಕು. ವಿವೇಕಾನಂದರ ಆದರ್ಶಗಳನ್ನು ಪಾಲಿಸಿ ದೇಶ ಎಂದೂ ಮರೆಯದ ಭಾರತದ ರತ್ನಗಳಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಸ್ಪಷ್ಟ ಗುರಿ ಇರಲಿ
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ್‌ ಹೆಬ್ಟಾರ್‌ ಮಾತನಾಡಿ, ಯುವಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಿ ಸ್ಪಷ್ಟ ಗುರಿ ಹಾಗೂ ನಿರಂತರ ಪ್ರಯತ್ನದಿಂದ ಯಶಸ್ಸು ಪಡೆಯಲು ಸಾಧ್ಯ ಎಂದರು.

159ನೇ ವಿವೇಕಾನಂದ ಜಯಂತಿಯ ಬಗ್ಗೆ ನೆಹರೂ ಯುವಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್‌ ಸೂಟರ್‌ಪೇಟೆ ಪ್ರಸ್ತಾವನೆಗೈದರು. ಡಾ| ಪ್ರಕಾಶಚಂದ್ರ ಶಿಶಿಲ, ಡಾ| ಶೈಲಾರಾಣಿ ಬಿ., ಡಾ| ಶೇಷಪ್ಪ ಕೆ., ಪ್ರೊ| ಗೋಪಾಲ್‌ ಎಂ. ಗೋಖಲೆ ಉಪಸ್ಥಿತರಿದ್ದರು.ಡಾ| ನವೀನ್‌ ಕೊಣಾಜೆ ಸ್ವಾಗತಿಸಿ, ಪ್ರೊ| ಜೆಫ್ರಿ ರಾಡ್ರಿಗಸ್‌ ವಂದಿಸಿದರು.

Advertisement

“ವಿವೇಕಾನಂದರ ಚಿಂತನೆಗಳಿಂದ ಸ್ಫೂರ್ತಿ’
ಉಡುಪಿ: ಜಿಲ್ಲೆಯ ಯುವ ಜನತೆ ಬುದ್ಧಿವಂತರಾಗಿದ್ದರೂ ನಾಗರಿಕ ಸೇವೆ ಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿಲ್ಲ. ಅವರು ವಿವೇಕಾನಂದರ ಚಿಂತನೆಗಳಿಂದ ಸ್ಫೂರ್ತಿ ಪಡೆದು ನಾಗರಿಕ ಸೇವಾ ವಲಯ ದಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ಕಾರ್ಯನಿರ್ವಹಿಸ ಬೇಕು ಎಂದು ಶಾಸಕ ರಘುಪತಿ ಭಟ್‌ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಕಾಲೇಜು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳ ಸಹಯೋಗ ದಲ್ಲಿ ರಜತಾದ್ರಿಯಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತರಬೇತಿ ಕಾರ್ಯಕ್ರಮ
ನಾಗರಿಕ ಸೇವಾ ಪರೀಕ್ಷೆ ಕುರಿತಂತೆ ಜಿಲ್ಲಾಡಳಿತದ ಮೂಲಕ ತರಬೇತಿ ಕಾರ್ಯ ಕ್ರಮ ಆಯೋಜಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಂಡು ನಾಗರಿಕ ಸೇವೆಯ ಮೂಲಕ ವಿವೇಕಾನಂದರ ಆಶಯ
ದಂತೆ ಉತ್ತಮ ಸಮಾಜ, ಸದೃಢ ದೇಶ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದರು.

ವಿವೇಕಾನಂದರ ಚಿಂತನೆ ಪ್ರೇರಣೆ
ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಮಾತನಾಡಿ, ನಾನು ನಾಗರಿಕ ಸೇವಾ ಪರೀಕ್ಷೆ ಎದುರಿಸಲು ವಿವೇಕಾನಂದರ ಚಿಂತನೆಗಳೇ ಪ್ರೇರಣೆ. “ನಿನ್ನನ್ನು ನೀನು ನಂಬು’ ಹಾಗೂ “ಎದ್ದೇಳು ಗುರಿ ಮುಟ್ಟುವವರೆಗೆ ನಿಲ್ಲದಿರು’ ಎಂಬ ಅವರ ಸ್ಫೂರ್ತಿದಾಯಕ ಮಾತುಗಳು ಸರ್ವಕಾಲಕ್ಕೂ ಸಮ್ಮತವಾಗಿವೆ. ಜಿಲ್ಲೆಯ ಯುವಜನತೆಯು ಜಿಲ್ಲಾಡಳಿತದ ಎಲ್ಲ ಕಾರ್ಯಗಳಿಗೆ ಉತ್ತಮ ಸಹಕಾರ ನೀಡುತ್ತಿದ್ದು, ಕ್ಲೀನ್‌ ಇಂಡಿಯಾ ಮತ್ತು ಫಿಟ್‌ ಇಂಡಿಯಾ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಸಹಕಾರ ನೀಡಿದ್ದಾರೆ. ಜಿಲ್ಲಾಡಳಿತ ಇತ್ತೀಚೆಗೆ ಆಯೋ ಜಿಸಿದ್ದ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗ ದೊರಕಿಸಲಾಗಿದೆ ಎಂದರು.

ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್‌, ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ, ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ನೆಹರೂ ಯುವ ಕೇಂದ್ರದ ಸಮನ್ವ ಯಾಧಿಕಾರಿ ವಿಲ್ಫೆ†ಡ್‌ ಡಿ’ಸೋಜಾ ಸ್ವಾಗತಿಸಿದರು. ಪ್ರಾಧ್ಯಾಪಕ ರಾಜೇಂದ್ರ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next