Advertisement

ಪುತ್ತೂರು : ಹುಟ್ಟುಹಬ್ಬದ ಪಾರ್ಟಿಯಲ್ಲಿ ವಿದ್ಯಾರ್ಥಿನಿಯರು –ವೀಡಿಯೋ ವೈರಲ್‌

07:21 AM Dec 08, 2022 | Team Udayavani |

ಪುತ್ತೂರು : ಖಾಸಗಿ ಪ್ಯಾರಾಮೆಡಿಕಲ್‌ ಶಿಕ್ಷಣ ಸಂಸ್ಥೆಯೊಂದರ ಹಿಂದೂ ಮತ್ತು ಮುಸ್ಲಿಂ ವಿದ್ಯಾರ್ಥಿಗಳಿದ್ದ ಬರ್ತ್‌ಡೇ ಪಾರ್ಟಿಯಲ್ಲಿ ಹಿಂದೂ ವಿದ್ಯಾರ್ಥಿನಿಯರು ಭಾಗವಹಿಸಿದ್ದ ವೀಡಿಯೋ ಟ್ರೋಲ್‌ ಪೇಜ್‌ನಲ್ಲಿ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ಬರ್ತ್‌ಡೇ ಪಾರ್ಟಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿತ್ತು. ಈ ಕುರಿತು ಹಿಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿ ಶಿಕ್ಷಣ ಸಂಸ್ಥೆಗೆ ಮಾಹಿತಿ ನೀಡಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಯಿಂದ ಎಚ್ಚರಿಕೆ ನೀಡಲಾಗಿದೆ. ಇದೀಗ ಬರ್ತ್‌ಡೇ ಪಾರ್ಟಿಯ ವೀಡಿಯೋ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ವೈರಲ್‌ ಮಾಡಿರುವ ಕೆಲವು ವಿದ್ಯಾರ್ಥಿಗಳ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next