Advertisement
ಜೇನುಕುರುಬರ ತಿಮ್ಮ (45) ಕಾಡುಕೋಣದ ದಾಳಿಗೆ ತುತ್ತಾದವರು. ಅವರು ಎಂದಿನಂತೆ ಮನೆ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಕಾಡುಕೋಣ ದಾಳಿ ಮಾಡಿದೆ. ಕೊಂಬಿನಿಂದ ತಿವಿದ ಪರಿಣಾಮ ಎಡಗಾಲಿಗೆ ಗಂಭೀರ ಗಾಯವಾಗಿದೆ.
ನೀಡಿ ಪರಿಶೀಲಿಸಿದರು. ರಾಜ್ಯ ವನ್ಯಜೀವಿ ಸಂರಕ್ಷಣ ಸಮಿತಿ ಸದಸ್ಯ ಸಂಕೇತ್ ಪೂವಯ್ಯ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದರು. ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡುಕೋಣ ದಾಳಿ ಕುರಿತು ಕ್ಷೇತ್ರದ ಶಾಸಕ ಎಸ್. ಪೊನ್ನಣ್ಣ ಅವರ ಗಮನಕ್ಕೆ ತರಲಾಗಿದೆ. ಗಾಯಾಳುವಿಗೆ ಸೂಕ್ತ ಚಿಕಿತ್ಸೆ ದೊರಕಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಶಾಸಕರು ಸೂಚಿಸಿದ್ದಾರೆ ಎಂದರು.