Advertisement

ಬಿಸ್ವಾಸ್‌ಗೆ ತನಿಖೆ ಹೊಣೆ: ಹಗರಣ ತನಿಖೆಗೆ ಚುನಾವಣ ಆಯೋಗದಿಂದ ಐಪಿಎಸ್‌ ಅಧಿಕಾರಿ ನೇಮಕ

11:56 PM Nov 18, 2022 | Team Udayavani |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಎಬ್ಬಿಸಿರುವ ಮತದಾರರ ಗೌಪ್ಯ ಮಾಹಿತಿ ಸೋರಿಕೆ ಪ್ರಕರಣ ಸಂಬಂಧ ತನಿಖೆಗಾಗಿ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಾಗಿರುವ ಹಿರಿಯ ಐಎಎಸ್‌ ಅಧಿಕಾರಿ ಆದಿತ್ಯ ಅಮ್ಲಾನ್‌ ಬಿಸ್ವಾಸ್‌ ಆವರನ್ನು ರಾಜ್ಯ ಚುನಾವಣ ಆಯೋಗ ನೇಮಿಸಿದೆ.

Advertisement

ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಮಧ್ಯೆ ಪ್ರಕರಣದ ಕುರಿತಂತೆ ರಾಜಕೀಯ ವಾಕ್ಸಮರ ಬಿರುಸಾಗಿದ್ದು, ಸಮಗ್ರ ತನಿಖೆ ನಡೆಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮವಾಗಿಲ್ಲ ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ಮಲ್ಲೇಶ್ವರದ ಸಮೃದ್ಧಿ ಕಟ್ಟಡದಲ್ಲಿ ವಾಸಿಸುತ್ತಿದ್ದ “ಚಿಲುಮೆ’ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್‌ ಮನೆಗೆ ಬೀಗ ಹಾಕಿ ಕೆಲವು ದಾಖಲೆಗಳೊಂದಿಗೆ ಪರಾರಿಯಾಗಿದ್ದಾರೆ. ಹಾಗೆಯೇ ಹಲಸೂರು ಗೇಟ್‌ ಎಸಿಪಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪೊಲೀಸರು ಮಲ್ಲೇಶ್ವರದಲ್ಲಿರುವ “ಚಿಲುಮೆ’ ಕಚೇರಿಯ ಬೀಗ ಒಡೆದು ದಾಳಿ ನಡೆಸಿದ್ದಾರೆ. ಹಲವಾರು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಕಚೇರಿ ಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ಕೆಲವು ದಾಖಲೆಗಳು ಪತ್ತೆಯಾಗಿವೆ. ಕಂಪ್ಯೂ ಟರ್‌ ಗಳಲ್ಲಿ ಕೆಲವು ತಾಂತ್ರಿಕ ಸಾಕ್ಷ éಗಳನ್ನು ಡಿಲೀಟ್‌ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸೈಬರ್‌ ಕ್ರೈಂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಡಿಲೀಟ್‌ ಆಗಿರುವ ಡೇಟಾ ರಿಟ್ರೀವ್‌ ಮಾಡುವ ಪ್ರಕ್ರಿಯೆಯೂ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆಂತರಿಕ ತನಿಖೆಗೆ ಆದೇಶ
ಮತದಾರರ ಮಾಹಿತಿ ಸಂಗ್ರಹ ಅಕ್ರಮಕ್ಕೆ ನೆರವಾದ ಅಧಿಕಾರಿಗಳ ವಿರುದ್ಧ ಆಂತರಿಕ ತನಿಖೆ ನಡೆಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ನಿರ್ಧರಿಸಿದ್ದಾರೆ. 48 ತಾಸು ಗಳಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ಮತ ದಾರರ ಪಟ್ಟಿ ಪರಿಷ್ಕರಣೆ, ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಬಗ್ಗೆ ಜನ ರಲ್ಲಿ ಜಾಗೃತಿ ಮೂಡಿಸಲು “ಚಿಲುಮೆ’ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಆದರೆ ಸಂಸ್ಥೆ ನೇಮಕ ಮಾಡಿದವರು ಮತದಾರರಿಂದ ಖಾಸಗಿ ಮಾಹಿತಿಯನ್ನು ಪಡೆಯುತ್ತಿ ದ್ದರು ಮತ್ತು ಅದನ್ನು ಬಿಬಿಎಂಪಿಗೆ ಸಲ್ಲಿಸುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ. ಅಲ್ಲದೆ ಸಂಸ್ಥೆ ನೇಮಕ ಮಾಡಿದವರಿಗೆ ಬಿಬಿಎಂಪಿಯಿಂದ ಮತಗಟ್ಟೆ ಸಮನ್ವಯ ಅಧಿಕಾರಿ ಹೆಸರಿನಲ್ಲಿ ಅಧಿಕೃತ ಗುರುತಿನ ಚೀಟಿ ನೀಡಲಾಗಿರುವುದು ಬೆಳಕಿಗೆ ಬಂದಿದೆ. ಹೀಗೆ ಗುರುತಿನ ಚೀಟಿ ಅಕ್ರಮಕ್ಕೆ ನೆರವಾಗಿರುವ ಬಗ್ಗೆ ಆಂತರಿಕ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ವಿಶೇಷ ಆಯುಕ್ತರು ಮತ್ತಿತರ ಹಿರಿಯ ಅಧಿಕಾರಿಗಳಿಗೆ ಆಂತರಿಕ ತನಿಖೆ ನಡೆಸುವಂತೆ ಸೂಚಿಸಲಾಗಿದೆ.

Advertisement

ಇಬ್ಬರ ಬಂಧನ
ಚಿಲುಮೆ ಕಚೇರಿ ಮೇಲೆ ದಾಳಿ ನಡೆಸಿರುವ ಪೊಲೀಸರು ಕೆಲವು ದಾಖಲೆಗಳನ್ನು ಜಪ್ತಿ ಮಾಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್‌ ಜತೆ ನಿರಂತರ ಸಂಪರ್ಕದಲ್ಲಿದ್ದ ರೇಣುಕಾ ಪ್ರಸಾದ್‌, ಧರ್ಮೇಶ್‌ನನ್ನು ಬಂಧಿಸಲಾಗಿದೆ. ಹಾಗೆಯೇ ಸಂಸ್ಥೆಯ ಬಿಸಿನೆಸ್‌ ಹೆಡ್‌ ಸುಧಾಕರ್‌ ನಾಯಕ್‌, ಕಚೇರಿ ಸಿಬಂದಿ ರಕ್ಷಿತ್‌ ಅವರನ್ನು ವಶಕ್ಕೆ ತೆಗೆದುಕೊಂಡು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಿಸಿನೆಸ್‌ ವಿಚಾರ ಬಿಟ್ಟು ಮತದಾರರ ಪಟ್ಟಿ ಬಗ್ಗೆ ಯಾವುದೇ ವಿಚಾರ ಗೊತ್ತಿಲ್ಲ ಎಂದು ಸುಧಾಕರ್‌ ನಾಯಕ್‌ ಹೇಳಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿಗೆ ಶನಿವಾರ ನೋಟಿಸ್‌ ಕೊಟ್ಟು ದಾಖಲೆಗಳನ್ನು ತರಿಸಿಕೊಳ್ಳಲಾಗುವುದು. ಅದೇ ರೀತಿ ಆರೋಪ ಕೇಳಿಬಂದಿರುವ ಸಂಸ್ಥೆಗೂ ನೋಟಿಸ್‌ ಜಾರಿಗೊಳಿಸಲಾಗುವುದು.
– ಆದಿತ್ಯ ಆಮ್ಲಾನ್‌ ಬಿಸ್ವಾಸ್‌,
ಪ್ರಾದೇಶಿಕ ಆಯುಕ್ತ

ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ, ಅದರ ಮಾಲಕರು, ಹಣಕಾಸು ಸಾಮರ್ಥ್ಯ, ಉದ್ಯೋಗಿಗಳ ಸಂಖ್ಯೆ, ಅದರ ಹಣಕಾಸಿನ ಮೂಲದ ಬಗ್ಗೆ ತನಿಖೆಯಾಗಲಿ.
-ಸಿದ್ದರಾಮಯ್ಯ, ವಿಪಕ್ಷ ನಾಯಕ

ಸಂಸ್ಥೆಯ ನಿರ್ದೇಶಕರು ಕಚೇರಿ ಖಾಲಿ ಮಾಡಿ ತೆರಳಿ ದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್‌ ಗೌಡ ನೇತೃತ್ವದಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. – ಪ್ರತಾಪ್‌ ರೆಡ್ಡಿ,
ಬೆಂಗಳೂರು ಪೊಲೀಸ್‌ ಆಯುಕ್ತ

ಮತದಾರರ ಪಟ್ಟಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್‌ ಆರೋಪದಲ್ಲಿ ಹುರುಳಿಲ್ಲ. ಮುಂಬರುವ ಚುನಾವಣೆಯಲ್ಲಿ ಸೋಲು ಒಪ್ಪಿಕೊಂಡು ಕಾಂಗ್ರೆಸ್‌ ಈ ರೀತಿ ಆರೋಪ ಮಾಡುತ್ತಿದೆ.
-ಬಿ.ಎಸ್‌. ಯಡಿಯೂರಪ್ಪ,
ಮಾಜಿ ಮುಖ್ಯಮಂತ್ರಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾಗಿರುವ ಎಲ್ಲ ಆರೋಪಗಳು ಹಾಗೂ ಕಾಂಗ್ರೆಸ್‌ ಸಲ್ಲಿಸಿರುವ ದೂರು ಆಧರಿಸಿ ಆದಷ್ಟು ಶೀಘ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಮನೋಜ್‌ ಕುಮಾರ್‌ ಮೀನಾ,
ರಾಜ್ಯ ಮುಖ್ಯ ಚುನಾವಣಾಧಿಕಾರಿ.

Advertisement

Udayavani is now on Telegram. Click here to join our channel and stay updated with the latest news.

Next