ಹುಬ್ಬಳ್ಳಿ: ಬಿಟ್ ಕಾಯಿನ್ ನಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆಂದು ಯಾರೋ ಹೇಳಿದ್ದಾರೆ. ಆದರೆ ಈ ಬಗ್ಗೆ ಅವರೇ ಸ್ಪಷ್ಟಪಡಿಸಲಿ. ಮಾಜಿ ಸಚಿವ ಪ್ರಿಯಾಂಕಾ ಖರ್ಗೆ ಆರೋಪಕ್ಕೆ ನಾನು ಸಹಮತ ವ್ಯಕ್ತಪಡಿಸಿಸುತ್ತೇನೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಿಟ್ ಕಾಯಿನ್ ದಲ್ಲಿ ಕಾಂಗ್ರೆಸ್ ನವರು ಇದ್ದರೆ ಪಕ್ಷವು ಅವರ ವಿರುದ್ಧ ಕ್ರಮಕೈಗೊಳ್ಳುತ್ತದೆ. ಬಿಜೆಪಿಯವರು ಇದ್ದರೆ ಆ ಪಕ್ಷ ಕ್ರಮಕೈಗೊಳ್ಳಬೇಕು ಎಂದರು.
ದಲಿತ ಮುಖ್ಯಮಂತ್ರಿ ವಿಚಾರವಾಗಿ ಸಾರ್ವಜನಿಕವಾಗಿ ಚರ್ಚೆ ಮಾಡಿಲ್ಲ, ಮಾಡುವುದಿಲ್ಲ. 113 ಕ್ಷೇತ್ರದಲ್ಲಿ ಪಕ್ಷ ಗೆದ್ದ ನಂತರವೇ ಆ ಬಗ್ಗೆ ಚರ್ಚೆ ಮಾಡಲಾಗುತ್ತದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಸಿಎಲ್ ಪಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ದಲಿತ ಸಿಎಂ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾನು ಬಹಿರಂಗವಾಗಿ ಚರ್ಚೆ ರೂಪದಲ್ಲಿ ಇದನ್ನು ತೆಗೆದುಕೊಂಡು ಹೋಗುವುದಿಲ್ಲ.
ದಲಿತ ಎಂಬ ಹೆಸರಿನಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಾ ಇದ್ದಾರೆ. ಹೊಟ್ಟೆ ಪಾಡಿಗಾಗಿ ಕೆಲವರು ಬಿಜೆಪಿಗೆ ಹೋಗಿದ್ದಾರೆಂಬ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದರು. ಸಿದ್ದರಾಮಯ್ಯನವರು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದರು.
ಇದನ್ನೂ ಓದಿ : ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿಗೆ ಹೋಗಿದ್ದು ನೂರಕ್ಕೆ ನೂರು ಸತ್ಯ : ತಂಗಡಗಿ