Advertisement

ಬಿಟ್‌ ಕಾಯಿನ್‌ ಪ್ರಕರಣ: ಸಿದ್ದು ಬೇಜವಾಬ್ದಾರಿ ಹೇಳಿಕೆ: ಕ್ಯಾ|ಗಣೇಶ್‌ ಕಾರ್ಣಿಕ್‌

10:49 PM Nov 11, 2021 | Team Udayavani |

ಮಂಗಳೂರು: ಬಿಟ್‌ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದು, ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ| ಗಣೇಶ್‌ ಕಾರ್ಣಿಕ್‌ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

Advertisement

ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಇಬ್ಬರು ಕಾಂಗ್ರೆಸ್‌ ನಾಯಕರ ಪುತ್ರರ ಹೆಸರು ಪೊಲೀಸ್‌ ತನಿಖೆಯಲ್ಲಿ ಕೇಳಿ ಬಂದಿದೆ. ಈ ವಿಚಾರ ಸಿದ್ದರಾಮಯ್ಯನವರಿಗೆ ತಿಳಿದಿದೆ. 2018ರಲ್ಲಿ ಬೆಂಗಳೂರಿನ ಹೊಟೇಲೊಂದರಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರ ಪುತ್ರ ಭಾಗಿಯಾಗಿದ್ದು, ಅದಕ್ಕೂ ಬಿಟ್‌ ಕಾಯಿನ್‌ ಪ್ರಕರಣಕ್ಕೂ ಸಂಬಂಧವಿರುವ ಬಗ್ಗೆ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಆಗ ಕಾಂಗ್ರೆಸ್‌ ಆಡಳಿತದಲ್ಲಿದ್ದು ಬಿಟ್‌ ಕಾಯಿನ್‌ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷದ ಇಬ್ಬರು ಪ್ರಮುಖ ನಾಯಕರ ಪುತ್ರರ ಹೆಸರು ಇದರಲ್ಲಿ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿಪಕ್ಷದ ನಾಯಕ ಸ್ಥಾನಕ್ಕೆ ಹಾಗೂ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್‌ ಅವರು ರಾಜೀನಾಮೆ ನೀಡುತ್ತಾರೆಯೇ? ಇದರಲ್ಲಿ ಅವರ ಜವಾಬ್ದಾರಿ ಏನು ಎಂದು ಪ್ರಶ್ನಿಸಿದರು.

ಇದನ್ನೂ ಓದಿ:600ನೇ ಗಗನಯಾತ್ರಿಯ ಹೊತ್ತ ಸ್ಪೇಸ್‌ಎಕ್ಸ್‌ ರಾಕೆಟ್‌ ನಭಕ್ಕೆ

ಬಿಟ್‌ ಕಾಯಿನ್‌ ಪ್ರಕರಣದ ಬಗ್ಗೆ ತನಗೆ ಎಲ್ಲ ಮಾಹಿತಿ ಗೊತ್ತಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮಾಹಿತಿ ಗೊತ್ತಿದ್ದೂ ಬಚ್ಚಿಡುವುದು ಅಪರಾಧವಾಗುತ್ತದೆ. ಗೊತ್ತಿರುವ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

Advertisement

ಬಿಟ್‌ ಕಾಯಿನ್‌ ಪ್ರಕರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ಸರಕಾರದ ನಿಲುವು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಪ್ರಾಮಾಣಿಕವಾದ ತನಿಖೆಗೆ ಸಿದ್ಧವಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ವಕ್ತಾರರಾದ ಜಗದೀಶ ಶೇಣವ, ರಾಧಾಕೃಷ್ಣ ಹಾಗೂ ಮಾಧ್ಯಮ ಪ್ರಮುಖ್‌ ರಣದೀಪ ಕಾಂಚನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next